ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್(64) ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ;

Update: 2024-03-01 07:58 GMT
ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
Click the Play button to listen to article

ಮಂಗಳೂರು: ಹಿರಿಯ ಪತ್ರಕರ್ತ ಮನೋಹರ ಪ್ರಸಾದ್(64) ಅವರು ಶುಕ್ರವಾರ(ಮಾ.1) ಮುಂಜಾನೆ ನಿಧನರಾಗಿದ್ದಾರೆ.

ಕರಾವಳಿಯ ಹಿರಿಯ ಪತ್ರಕರ್ತರಾಗಿದ್ದ ಅವರು, ತಮ್ಮ ಕಂಚಿನ ಕಂಠದ ಕಾರ್ಯಕ್ರಮ ನಿರೂಪಣೆಗೂ ಹೆಸರಾಗಿದ್ದರು. ಅಲ್ಲದೆ ಕತೆಗಾರ, ಕವಿ, ರಂಗಭೂಮಿ ಹಾಗೂ ಚಲನಚಿತ್ರ ನಟರಾಗಿ ಕೂಡ ಜನಪ್ರಿಯರಾಗಿದ್ದರು.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಅವರು ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ಬಳಿಕ ʼನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ʼಉದಯವಾಣಿ’ಯ ಮಂಗಳೂರು ವರದಿಗಾರರಾಗಿ ವೃತ್ತಿ ಮುಂದುವರಿಸಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದ ಅವರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿ-ಪುರಸ್ಕಾರಗಳಿಗೆ ಪಾತ್ರರಾಗಿದ್ದರು.

Tags:    

Similar News