ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ | ಅಂಕ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಜುಲೈ 10ರಂದು ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಜು.10ರಂದು ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ವಿದ್ಯಾರ್ಥಿಗಳು ಎನ್‌ಐಸಿಯ ಜಾಲತಾಣ httsps://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 ಜೂನ್ 14 ರಿಂದ 22ರವರೆಗೆ ನಡೆದಿತ್ತು. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 724 ಪರೀಕ್ಷಾ ಕೇಂದ್ರಗಳಲ್ಲಿ 2,23,308 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 1,44,160 ಬಾಲಕರು ಹಾಗೂ 7,9,148 ಬಾಲಕಿಯರು ಇದ್ದಾರೆ. ಫಲಿತಾಂಶ ಹೆಚ್ಚಳಕ್ಕಾಗಿ 13085 ವಿದ್ಯಾರ್ಥಿಗಳು SSLC-2 ಪರೀಕ್ಷೆ ಬರೆದಿದ್ದರು.
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆ ನಡೆಸುತ್ತಿದ್ದ ಈ ಮೊದಲಿನ ಪದ್ಧತಿಯನ್ನು ಕೈಬಿಟ್ಟು ಇದೇ ಮೊದಲ ಬಾರಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪ್ರತಿ ಶೈಕ್ಷಣಿಕ ವರ್ಷದಲ್ಲಿ ಮೂರು ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಕೈಗೊಂಡಿದೆ. ಅದರಂತೆ ಮಾರ್ಚ್, ಮತ್ತು ಜೂನ್ ನಲ್ಲಿ ಎರಡು ಪರೀಕ್ಷೆಗಳು ನಡೆದಿದ್ದು, ಮತ್ತೊಂದು ಪರೀಕ್ಷೆ ಜುಲೈ ಕೊನೆಯ ವಾರದಲ್ಲಿ ಆರಂಭವಾಗಲಿದೆ ಎನ್ನಲಾಗಿದೆ.
ಹಿಂದಿನ ಪರೀಕ್ಷೆಗಳಲ್ಲಿ ಫೇಲಾದವರು ಮಾತ್ರವಲ್ಲದೆ, ಪಾಸಾಗಿದ್ದೂ ಅಂಕವನ್ನು ಹೆಚ್ಚಿಸಿಕೊಳ್ಳುವ ಇಚ್ಛೆಯುಳ್ಳ ವಿದ್ಯಾರ್ಥಿಗಳು ಕೂಡ ಮುಂದಿನ ಪರೀಕ್ಷೆ ತೆಗೆದುಕೊಳ್ಳುವ ಅವಕಾಶವಿದೆ. ಅಲ್ಲದೆ, ಮತ್ತೊಂದು ಪರೀಕ್ಷೆ ಬರೆದ ಬಳಿಕ, ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕ ಬಂದಿವೆಯೋ ಆ ಪರೀಕ್ಷೆಯ ಫಲಿತಾಂಶವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಕೂಡ ವಿದ್ಯಾರ್ಥಿಗಳಿಗೆ ಇದೆ.