​ಎಸ್​ಎಸ್‌ಎಲ್‌ಸಿ ಫಲಿತಾಂಶk

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ನಾಳೆ (ಮೇ 09) ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.;

Update: 2024-05-08 10:19 GMT
ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ಹೊರಬೀಳಲಿದೆ.
Click the Play button to listen to article

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ನಾಳೆ (ಮೇ 09) ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು, ಮಾರ್ಚ್ 2024ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಮೇ 09ರಂದು ಬೆಳಗ್ಗೆ 10:30ಕ್ಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ?

  • ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
  • ಹೊಸ ಲಾಗಿನ್ ಪುಟವು ತೆರೆಯುತ್ತದೆ
  • ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  • ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Tags:    

Similar News