ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆಶಿ ಹೇಳಿಸಿದರೋ?: ಅಶೋಕ್ ಪ್ರಶ್ನೆ
ಡಿ ಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.;
ಡಿ ಕೆ ಶಿವಕುಮಾರ್ ಆವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ. ಸಿದ್ದರಾಮಯ್ಯಅವರಿಗೆ ರಾಜಕೀಯದ ಒಳಸುಳಿ ತಿಳಿದುಕೊಳ್ಳುವ ಸಾಮರ್ಥ್ಯ ಇದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದೂ ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿ ಕೆ ಶಿವಕುಮಾರ್ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಮೂರು ಡಿಸಿಎಂ ಬೇಡಿಕೆಯ ರಾಗಕ್ಕೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಧರ್ಮರಾಯ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದು ಪ್ರತಿದಾಳ ಉರುಳಿಸಿದ್ದಾರೆ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ.