ಈಶ್ವರಪ್ಪಗೆ ಡೆಡ್ ಲೈನ್: ನಾಮಪತ್ರ ವಾಪಸ್ ಪಡೆಯದಿದ್ರೆ ಬಿಜೆಪಿಯಿಂದ ಉಚ್ಛಾಟನೆ?

ಬಿವೈ ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು.

Update: 2024-04-15 14:44 GMT
ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ
Click the Play button to listen to article

ಶಿವಮೊಗ್ಗ: ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ತಮ್ಮ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಇದೀಗ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಬಿವೈ ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ.

ಇನ್ನು ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಅಲ್ಲದೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದರು.

Tags:    

Similar News