ವಿರಾಟ್‌ ಕೊಹ್ಲಿ- ಅನುಷ್ಕಾ ಶರ್ಮಾ ದಂಪತಿಗೆ ಗಂಡು ಮಗು ಜನನ

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.;

Update: 2024-02-21 05:41 GMT
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.
Click the Play button to listen to article

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿ 15ರಂದೇ ಗಂಡು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದು ಈ ಸುದ್ದಿಯನ್ನು ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕೊಹ್ಲಿ ಮತ್ತು ಅನುಷ್ಕಾ ಈಗಾಗಲೇ ಮೂರು ವರ್ಷದ ಹೆಣ್ಣು ಮಗಳು ವಾಮಿಕಾ ಇದ್ದಾಳೆ.

ʻನಮ್ಮ ಹೃದಯದಲ್ಲಿ ಬಹಳ ಸಂತೋಷ ಮತ್ತು ಪ್ರೀತಿಯಿಂದ  ಫೆಬ್ರವರಿ 15ರಂದು ವಾಮಿಕಾಳ ಚಿಕ್ಕ ಸಹೋದರ ಅಕಾಯ್ ನ್ನು ಜಗತ್ತಿಗೆ ಸ್ವಾಗತಿಸಿದ್ದೇವೆ.  ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನೀವು ನಮ್ಮ ಖಾಸಗಿತನವನ್ನು ಗೌರವಿಸಬೇಕೆಂದು ವಿನಂತಿಸುತ್ತೇವೆʼ ಎಂದು ಪೋಸ್ಟ್‌ ಮಾಡಿದ್ದಾರೆ.

ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಸರಣಿಯ ಮೊದಲ ಎರಡು ಟೆಸ್ಟ್‌ ಗಳಿಂದ ಹೊರಗುಳಿದಿದ್ದರು. ನಂತರ ಕೊನೆಯ ಮೂರು ಟೆಸ್ಟ್‌ಗಳಿಂದಲೂ ಹಿಂದೆ ಸರಿದರು.

ಜನವರಿಯಲ್ಲಿ ಕೇಪ್ ಟೌನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಅವರು 46 ಮತ್ತು 12 ರನ್ ಗಳಿಸಿದ್ದರು.ಪಂದ್ಯದಲ್ಲಿ ಭಾರತ ಏಳು ವಿಕೆಟ್‌ಗಳಿಂದ ಗೆದ್ದಿತು.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರಿಂದ ಮುನ್ನಡೆ ಸಾಧಿಸಿದೆ.

Tags:    

Similar News