ಕೋಲ್ಡ್ರಿಫ್ ಸಿರಪ್ ಸೇವಿಸಿ 20 ಮಕ್ಕಳ ಸಾವು : ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಮಾಲೀಕ ಬಂಧನ
ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಬುಧವಾರ ರಾತ್ರಿ ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿ ರಂಗನಾಥನ್ ಅವರನ್ನು ಭೋಪಾಲ್‌ಗೆ ಕರೆದೊಯ್ಯಲಾಗಿದೆ.
By : The Federal
Update: 2025-10-09 04:34 GMT
ಕಳೆದ 24 ಗಂಟೆಗಳಲ್ಲೇ ಮತ್ತೆ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟಾರೆ ಇಲ್ಲಿಯವರೆಗೆ ಛಿಂದ್ವಾರ, ಪಂಧುರ್ನಾ ಮತ್ತು ಬೇತುಲ್ ಜಿಲ್ಲೆಗಳಲ್ಲಿ 20 ಮಕ್ಕಳು ಮೃತಪಟ್ಟಿದ್ದಾರೆ. ಐವರು ಮಕ್ಕಳು ನಾಗ್ಪುರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.