ಪುಣೆ ಆಕ್ಸಿಡೆಂಟ್ | ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: 3 ಸಾವು, 6 ಮಂದಿಗೆ ಗಾಯ
"ನಾವು ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಆತ ಮದ್ಯದ ಅಮಲಿನಲ್ಲಿದ್ದನೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.;
ಮಹಾರಾಷ್ಟ್ರದ ಪುಣೆ ನಗರದಲ್ಲಿ ಸೋಮವಾರ ಮುಂಜಾನೆ ಫುಟ್ ಪಾತ್‌ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಘೋಲಿ ಪ್ರದೇಶದ ಫುಟ್‌ಪಾತ್‌ನಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. , ಲಾರಿ ಹರಿದ ಜಾಗದಲ್ಲಿ ಹಲವಾರು ಜನರು ಮಲಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಕೆಸ್‌ನಂದ್ ಫಾಟಾ ಪ್ರದೇಶದ ಬಳಿಯ ಫುಟ್‌ಫಾತ್‌ನಲ್ಲಿ ಅನೇಕ ಜನರು ಮಲಗಿದ್ದರು, ಅವರಲ್ಲಿ ಹೆಚ್ಚಿನವರು ಕಾರ್ಮಿಕರು. ಅವರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ನಾವು ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಆತ ಮದ್ಯದ ಅಮಲಿನಲ್ಲಿದ್ದರೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಅಧಿಕಾರಿ ಹೇಳಿದರು.
ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ. ಇತರ ಆರು ಜನರನ್ನು ಸಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.