ಮಸೀದಿ ಸಮೀಕ್ಷೆ ವೇಳೆ ಗಲಾಟೆ; ಮೂವರು ಸಾವು, ಹಲವು ಪೊಲೀಸರಿಗೆ ಗಾಯ
ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅವರು ಜನಸಮೂಹವನ್ನು ಚದುರಿಸಲು ಅಶ್ರುವಾಯು ಮತ್ತು ಲಾಠಿಗಳನ್ನು ಬೀಸಿದ್ದರು.;
ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮೊಘಲರ ಕಾಲದ ಮಸೀದಿ ಸಮೀಕ್ಷೆ ವೇಳೆ ಉಂಟಾದ ಗಲಭೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ನ್ಯಾಯಾಲಯದ ಆದೇಶ ಪ್ರಕಾರ ಸಮೀಕ್ಷೆ ನಡೆಸುವಾಗ ಕಲ್ಲು ತೂರಾಟ ಪ್ರತಿಭಟನಾಕಾರರಿಗೆ ವಿರುದ್ಧ ಪೊಲೀಸರು ತಿರುಗೇಟು ನೀಡಿದ್ದರು. ಈ ರೀತಿಯಾಗಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಭದ್ರತಾ ಸಿಬ್ಬಂದಿ ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ.
ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅವರು ಜನಸಮೂಹವನ್ನು ಚದುರಿಸಲು ಅಶ್ರುವಾಯು ಮತ್ತು ಲಾಠಿಗಳನ್ನು ಬೀಸಿದ್ದರು.
"ದುಷ್ಕರ್ಮಿಗಳಲ್ಲಿ ಕೆಲವು ಗುಂಡು ಕೂಡ ಹಾರಿಸಿದ್ದಾರೆ. ಹಿಂಸಾಚಾರದಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಸಿಬ್ಬಂದಿಗೆ ಕಾಲಿಗೆ ಗುಂಡು ಬಿದ್ದಿದೆ. ಪೊಲೀಸ್ ವೃತ್ತ ಅಧಿಕಾರಿಗೆ ಮಾರಕಾಸ್ತ್ರಗಳಿಂದ ಹೊಡೆಯಲಾಗಿದ. 15 ರಿಂದ 20 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮೊರಾದಾಬಾದ್ ವಿಭಾಗೀಯ ಆಯುಕ್ತ ಆಂಜನೇಯ ಕುಮಾರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಾನ್ಸ್ಟೇಬಲ್ ಒಬ್ಬರ ತಲೆಗೆ ಗಂಭೀರ ಗಾಯವಾಗಿದ್ದು, ಡೆಪ್ಯೂಟಿ ಕಲೆಕ್ಟರ್ ಕಾಲು ಮುರಿದಿದೆ ಎಂದು ಮಾಹಿತಿ ನೀಡಿದ್ದಾರೆ. .
ಮೂರು ಸಾವು
ಮೃತಪಟ್ಟವರನ್ನು ನಯೀಮ್, ಬಿಲಾಲ್ ಮತ್ತು ನೌಮನ್ ಎಂದು ಗುರುತಿಸಲಾಗಿದೆ " ಎಂದು ಸಿಂಗ್ ಹೇಳಿದರು, ಅವರ ಮರಣೋತ್ತರ ಪರೀಕ್ಷೆಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಿದರು.
ಇಬ್ಬರು ಮಹಿಳೆಯರು ಸೇರಿದಂತೆ ಹತ್ತು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಕೆಲವರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕೆಲವು ಮೋಟಾರ್ ಸೈಕಲ್ ಗಳಿಗೆ ಬೆಂಕಿ ಹಚ್ಚಿದ್ದಾರೆ. "ಗುಂಡುಗಳನ್ನು ಎಲ್ಲಿಂದ ಹಾರಿಸಲಾಗಿದೆ ಎಂದು ನಾವು ತನಿಖೆ ನಡೆಸುತ್ತಿದ್ದೇವೆ" ಎಂದು ಅಧಿಕಾರಿ ಹೇಳಿದರು.
ಹಿಂಸಾಚಾರದ ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದರು.
ತೊಂದರೆಗೆ ಕಾರಣವೇನು?
ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ ಜಾಮಾ ಮಸೀದಿಯನ್ನು ಸಮೀಕ್ಷೆ ಮಾಡಲು ಮುಂದಾದಾಗ ಸಂಭಾಲ್‌ನಲ್ಲಿ ಗಲಭೆ ಉಂಟಾಗಿತ್ತು.
ಸ್ಥಳೀಯ ಆಡಳಿತದ ಪ್ರಕಾರ, ವಿವಾದಿತ ಸ್ಥಳದ ಬಗ್ಗೆ ನ್ಯಾಯಾಲಯದ ಆದೇಶದ ಪರಿಶೀಲನೆಯ ಭಾಗವಾಗಿ "ಅಡ್ವೊಕೇಟ್ ಕಮಿಷನರ್" ನಡೆಸಿದ ಎರಡನೇ ಸಮೀಕ್ಷೆಇದಾಗಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಸಮೀಕ್ಷೆ ಪ್ರಾರಂಭವಾಯಿತು. ಈ ವೇಳೆ ಜನಸಂದಣಿ ಸೇರಲು ಪ್ರಾರಂಭಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
"ಗುಂಪಿನಲ್ಲಿದ್ದ ಕೆಲವು ದುಷ್ಕರ್ಮಿಗಳು ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಸಣ್ಣ ಬಲ ಮತ್ತು ಅಶ್ರುವಾಯು ಬಳಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ತಿಳಿಸಿದ್ದಾರೆ.