ಜಮ್ಮು-ಕಾಶ್ಮೀರ: ಮನೆಯೊಳಗೆ ಬೆಂಕಿ: ಉಸಿರುಗಟ್ಟಿ 6 ಮಂದಿ ಸಾವು
ಮುಂಜಾನೆ 2.30 ರ ಸುಮಾರಿಗೆ ಬೆಂಕಿ ಜ್ವಾಲೆಯನ್ನು ಗಮನಿಸಿದ ಸ್ಥಳೀಯರು ಅಲ್ಲಿಗೆ ಧಾವಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಕಥುವಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.;
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಬುಧವಾರ ಮುಂಜಾನೆ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಿಂದ ಗಾಯಗೊಂಡಿರುವ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಜಿಲ್ಲೆಯ ಶಿವ ನಗರ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಲಗಿದ್ದವರು ಅಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಮುಂಜಾನೆ 2.30 ರ ಸುಮಾರಿಗೆ ಬೆಂಕಿ ಜ್ವಾಲೆಯನ್ನು ಗಮನಿಸಿದ ಸ್ಥಳೀಯರು ಅಲ್ಲಿಗೆ ಧಾವಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಕಥುವಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ . ಅಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನವರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅವರು ಹೇಳಿದರು.
"ಹತ್ತು ಜನರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ವೇಳೆ ಬೆಂಕಿಯಿಂದ ಉಂಟಾದ ಹೊಗೆಯನ್ನು ಉಸಿರಾಡಿದ ನಂತರ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ, ಯಾವುದೇ ಸುಟ್ಟ ಗಾಯಗಳು ವರದಿಯಾಗಿಲ್ಲ.