ಡಂಪರ್ ಟ್ರಕ್​ಗೆ ಬಸ್​ ಡಿಕ್ಕಿ; 6 ಮಂದಿ ಸಾವು, 10 ಮಂದಿಗೆ ಗಾಯ

ವೇಗವಾಗಿ ಸಾಗುತ್ತಿದ್ದ ಬಸ್ ಹಿಂದಿನಿಂದ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ. ಇತರ ಎಂಟರಿಂದ ಹತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Update: 2024-12-17 05:50 GMT
Accident News

ಖಾಸಗಿ ಬಸ್​ ಒಂದು ಡಂಪರ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುಜರಾತ್ ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಭಾವನಗರದಿಂದ ಮಹುವಾ ಕಡೆಗೆ ತೆರಳುತ್ತಿದ್ದಾಗ ಬೆಳಿಗ್ಗೆ 6 ಗಂಟೆ ಸುಮಾರಿಗೆ ತ್ರಪಜ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.

ವೇಗವಾಗಿ ಸಾಗುತ್ತಿದ್ದ ಬಸ್ ಹಿಂದಿನಿಂದ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ. ಇತರ ಎಂಟರಿಂದ ಹತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಡಿಕ್ಕಿ ಎಷ್ಟು ತೀವ್ರವಾಗಿತ್ತೆಂದರೆ ಬಸ್ಸಿನ ಬಲಭಾಗದ ಮುಂಭಾಗದ ಭಾಗವು ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

Tags:    

Similar News