ಮಂಗಳವಾರ ಬೆಳಗ್ಗೆ ಪಕ್ಷದ ಶಾಸಕರ ಸಭೆ ನಡೆಯಲಿದ್ದು, ಹೊಸ ಸಿಎಂ ಹೆಸರನ್ನು ಚರ್ಚಿಸಲಾಗುವುದು ಎಂದು ಆಪ್ ಹೇಳಿದೆ.
ಮಂಗಳವಾರ ಸಂಜೆ 4.30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ʻಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಮಂಗಳವಾರ ಬೆಳಗ್ಗೆ ಎಎಪಿ ಶಾಸಕರ ಸಭೆ ನಡೆಯಲಿದೆ,ʼ ಎಂದು ಪಕ್ಷ ತಿಳಿಸಿದೆ.
ರಾಜೀನಾಮೆ ಘೋಷಣೆ: ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾದ ಕೇಜ್ರಿವಾಲ್, 48 ಗಂಟೆಗಳ ಒಳಗೆ ರಾಜೀನಾಮೆ ನೀಡುವುದಾಗಿ ಭಾನುವಾರ ಹೇಳಿದರು; ದೆಹಲಿಯಲ್ಲಿ ಶೀಘ್ರ ಚುನಾವಣೆ ನಡೆಸಬೇಕು. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಶಪಥ ಮಾಡಿದ್ದರು.