'ಬೋರ್ಡು ಇರದ ಬಸ್ಸನು ಹತ್ತಿ ಬಂದ ಚೋಕರಿʼ ನಟಿ ಶೆಫಾಲಿ ಜರಿವಾಲಾ ನಿಧನ

ಕಿರುತೆರೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸದಾ ಸಕ್ರಿಯರಾಗಿದ್ದ ಶೆಫಾಲಿ ಅವರ ನಿಧನ ಸುದ್ದಿ ಕೇಳಿ ಅವರ ಅಭಿಮಾನಿಗಳು ಮತ್ತು ಸಹೋದ್ಯೋಗಿಗಳಿಗೆ ಆಘಾತವಾಗಿದೆ. ಹಲವರು ಅವರಿಗೆ ಸಂತಾಪ ಸೂಚಿಸಿದ್ದಾರೆ.;

Update: 2025-06-28 04:20 GMT

'ಕಾಂಟಾ ಲಗಾ' ಐಕಾನಿಕ್ ಮ್ಯೂಸಿಕ್ ವಿಡಿಯೋ ಮೂಲಕ ಮನೆಮಾತಾಗಿದ್ದ ಹಾಗೂ ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯದ 'ಹುಡುಗರು' ಸಿನಿಮಾದ 'ತೊಂದ್ರೆ ಇಲ್ಲಾ ಪಂಕಜಾ' ಹಾಡಿನಲ್ಲಿ ಕಾಣಿಸಿಕೊಂಡಿದ್ದ ನಟಿ ಮತ್ತು ರೂಪದರ್ಶಿ ಶೆಫಾಲಿ ಜರಿವಾಲಾ (41) ಮುಂಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗುರುವಾರ ತಡರಾತ್ರಿ ಶೆಫಾಲಿ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಅವರನ್ನು ಪತಿ, ನಟ ಪರಾಗ್ ತ್ಯಾಗಿ ಮತ್ತು ಇತರ ಮೂವರು ಮುಂಬೈನ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದರು ಎಂದು ವರದಿಯಾಗಿದೆ.

ಕಿರುತೆರೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸದಾ ಸಕ್ರಿಯರಾಗಿದ್ದ ಶೆಫಾಲಿ ಅವರ ನಿಧನ ಸುದ್ದಿ ಕೇಳಿ ಅವರ ಅಭಿಮಾನಿಗಳು ಮತ್ತು ಸಹೋದ್ಯೋಗಿಗಳಿಗೆ ಆಘಾತವಾಗಿದೆ. ಹಲವರು ಅವರಿಗೆ ಸಂತಾಪ ಸೂಚಿಸಿದ್ದಾರೆ.

ಬಾಲಿವುಡ್ ಗಾಯಕ ಮಿಕಾ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, "ನನಗೆ ತೀವ್ರ ಆಘಾತವಾಗಿದೆ, ದುಃಖವಾಗಿದೆ ಮತ್ತು ಹೃದಯ ಭಾರವಾಗಿದೆ... ನಮ್ಮ ಪ್ರೀತಿಯ ತಾರೆ ಮತ್ತು ನನ್ನ ಆತ್ಮೀಯ ಸ್ನೇಹಿತೆ ಶೆಫಾಲಿ ನಮ್ಮನ್ನು ಅಗಲಿದ್ದಾರೆ. ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ. ನಿಮ್ಮ ನಗು ಮತ್ತು ಚೈತನ್ಯಕ್ಕಾಗಿ ನೀವು ಯಾವಾಗಲೂ ಸ್ಮರಣೀಯರು. ಓಂ ಶಾಂತಿ" ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ನಟ ಅಲಿ ಗೋನಿ ಸಹ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ "RIP Shefali" ಎಂದು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

Tags:    

Similar News