ಗುರುವಾರ (ಜೂನ್ 13) 242 ಪ್ರಯಾಣಿಕರನ್ನು ಮತ್ತು ಸಿಬ್ಬಂದಿಯನ್ನು ಹೊತ್ತು ಗುಜರಾತ್ನ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಸ್ವಲ್ಪ ಹೊತ್ತಿನಲ್ಲೇ ಪತನವಾಗಿತ್ತು. ಈ ವಿಮಾನ ಟೇಕ್ ಆಫ್ ಆದ ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ಅಹಮದಾಬಾದ್ನ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿ, ಬೆಂಕಿಯ ಉಂಡೆಯಾಗಿ ಸಿಡಿದು ಕನಿಷ್ಠ 265 ಜನರು ಸಾವನ್ನಪ್ಪಿದರು. ಇತ್ತೀಚಿನ ದಿನಗಳಲ್ಲಿ ದೇಶದ ಅತ್ಯಂತ ಭೀಕರ ವಾಯು ದುರಂತದಲ್ಲಿ ಹಲವಾರು ಜನರು ಸುಟ್ಟು ಕರಕಲಾಗಿದ್ದಾರೆ. ಈ ಅತಿ ಕೆಟ್ಟ ಅವಘಡದಲ್ಲಿ ವಿಮಾನದಲ್ಲಿದ್ದ ವಿಶ್ವಾಸ್ ಕುಮಾರ್ ರಮೇಶ್ ಎಂಬವರು ಮಾತ್ರ ಬದುಕುಳಿದಿದ್ದಾರೆ. ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಪ್ರಯಾಣಿಕರು ಮತ್ತು ಪೈಲಟ್ ಹಾಗೂ ಇತರ ಸಿಬ್ಬಂದಿ ಸೇರಿ 241 ಮಂದಿ ಸಾವನ್ನಪ್ಪಿದರೆ, ಉಳಿದ ಮೃತರು ವಿಮಾನ ಅಪ್ಪಳಿಸಿದ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನ 7 ಮಂದಿ. ಅಲ್ಲಿದ್ದ ಇತರ 60 ಮಂದಿ ಗಾಯಗೊಂಡಿದ್ದಾರೆ.ಎಲ್ಲಿ ಅವಘಡ?ವಿಮಾನ ನಿಲ್ದಾಣದ ಆವರಣದ ಪಕ್ಕದಲ್ಲಿರುವ ಏರ್ ಕಸ್ಟಮ್ ಕಾರ್ಗೋ ಕಚೇರಿ ಬಳಿ ವಿಮಾನ ಅಪಘಾತಕ್ಕೀಡಾಗಿದೆ.ವಿಮಾನ ನಿಲ್ದಾಣ ಪತನವಾದ ಕೂಡಲೇ 7 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನದಲ್ಲಿ ತೊಡಗಿವೆ. ವಿಮಾನ ಅಪಘಾತದ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಅಪಘಾತದ ಕಾರಣವನ್ನು ಇನ್ನೂ ಅಧಿಕಾರಿಗಳು ದೃಢಪಡಿಸಿಲ್ಲ. ಮೇಘನಿನಗರ ಪ್ರದೇಶ ಸಮೀಪದ ಧಾರ್ಪುರದಿಂದ ದಟ್ಟ ಹೊಗೆ ಗೋಚರಿಸುತ್ತಿದೆ. ಬಿಎಸ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಅಪಘಾತಕ್ಕೀಡಾದ ವಿಮಾನವು ಬೋಯಿಂಗ್ ಸಂಸ್ಥೆಯ 787 ಡ್ರೀಮ್ ಲೈನರ್ ಎಂದು ಹೇಳಲಾಗಿದೆ. ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.