All Party Meeting: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು; ಖರ್ಗೆ ಅಸಮಾಧಾನ
ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯ ಬಳಿಕ ರಾಷ್ಟ್ರೀಯ ಭದ್ರತೆಯ ಕುರಿತು ಚರ್ಚಿಸಲು ಕರೆಯಲಾದ ಸರ್ವಪಕ್ಷ ಸಭೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಜರಾಗಿರಲಿಲ್ಲ.;
ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಡೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೈರು ಹಾಜರಾಗಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸೂಕ್ತ ಕಾಲದಲ್ಲಿ ಅವರ ನಡೆಯನ್ನು ಪ್ರಶ್ನಿಸಲಾಗುವುದು ಎಂದು ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯ ಬಳಿಕ ರಾಷ್ಟ್ರೀಯ ಭದ್ರತೆಯ ಕುರಿತು ಚರ್ಚಿಸಲು ಕರೆಯಲಾದ ಸರ್ವಪಕ್ಷ ಸಭೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಜರಾಗಿರಲಿಲ್ಲ. ಈ ನಡೆಯನ್ನು ಖರ್ಗೆ ಪ್ರಶ್ನಿಸಿದ್ದಾರೆ.
ಸರ್ವ ಸಭೆಯ ಬಳಿಕ ಮಾತನಾಡಿದ ಖರ್ಗೆ, “ಪಹಲ್ಗಾಮ್ ದಾಳಿಯಂತಹ ಗಂಭೀರ ಘಟನೆಯ ಬಳಿಕ ರಾಷ್ಟ್ರೀಯ ಭದ್ರತೆಯ ಕುರಿತು ಚರ್ಚಿಸಲು ಕರೆದ ಸರ್ವಪಕ್ಷ ಸಭೆಗೆ ಪ್ರಧಾನಮಂತ್ರಿಯವರು ಗೈರಾಗಿರುವುದು ದುರದೃಷ್ಟಕರ. ಆಪರೇಷನ್ ಸಿಂದೂರ್‌ನಂತಹ ನಿರ್ಣಾಯಕ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ನಡೆದ ಈ ಸಭೆಯಲ್ಲೂ ಅವರು ಭಾಗವಹಿಸಿಲ್ಲ. ಇಂತಹ ಸಂಕಷ್ಟದ ಕಾಲದಲ್ಲಿ ದೇಶದ ಜನತೆಗೆ ಒಗ್ಗಟ್ಟಿನ ಸಂದೇಶ ಸಾರಲು ಪ್ರಧಾನಮಂತ್ರಿಯವರ ಉಪಸ್ಥಿತಿ ಅಗತ್ಯವಾಗಿತ್ತು,” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ
ಈ ಎಲ್ಲದರ ಬಗ್ಗೆ “ಈಗ ಟೀಕೆ ಮಾಡುವುದು ಸೂಕ್ತವಲ್ಲ, ದೇಶವು ಕಠಿಣ ಪರಿಸ್ಥಿತಿಯಲ್ಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಾವು ಪ್ರಧಾನಮಂತ್ರಿಯವರಿಗೆ ಪ್ರಶ್ನೆಗಳನ್ನು ಕೇಳುತ್ತೇವೆ,” ಎಂದು ಹೇಳಿದ್ದಾರೆ.
ದೇಶದ ಹಿತ ಮತ್ತು ರಾಷ್ಟ್ರೀಯ ಭದ್ರತೆ ಮುಖ್ಯವಾದ್ದರಿಂದ ಕೆಲವು ವಿಚಾರಗಳ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಸರ್ಕಾರಕ್ಕೆ ನಮ್ಮೆಲ್ಲರ ಬೆಂಬಲ ಇರುತ್ತದೆ ಎಂದು ಭರವಸೆ ನೀಡಿದ್ದೇವೆ' ಎಂದು ಅವರು ತಿಳಿಸಿದರು.
ಇದೇ ಧಾಟಿಯಲ್ಲಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವ ತಮ್ಮ ಪಕ್ಷದ ನಿರ್ಧಾರವನ್ನು ಮತ್ತೊಮ್ಮೆ ಖಚಿತಪಡಿಸಿದರು.
ಗುಪ್ತಚರ ವೈಫಲ್ಯವನ್ನು ಟೀಕಿಸಿದ್ದ ಖರ್ಗೆ
ಪಹಲ್ಗಾಮ್ ದಾಳಿಯ ಸಂದರ್ಭದಲ್ಲಿ, ಖರ್ಗೆ ಅವರು ಕೇಂದ್ರ ಸರ್ಕಾರದ ಗುಪ್ತಚರ ವೈಫಲ್ಯವನ್ನು ತೀವ್ರವಾಗಿ ಟೀಕಿಸಿದ್ದರು. ಮೇ 06ರಂದು ರಾಂಚಿಯಲ್ಲಿ ಮಾತನಾಡಿದ್ದ ಅವರು, “ಪಹಲ್ಗಾಮ್ ದಾಳಿಯ ಕುರಿತು ಮೂರು ದಿನಗಳ ಮೊದಲೇ ಗುಪ್ತಚರ ವರದಿಗಳಿದ್ದವು. ಆದರೂ, ಕೇಂದ್ರವು ಯಾಕೆ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಿಲ್ಲ” ಎಂದು ಪ್ರಶ್ನಿಸಿದ್ದರು.