ಉತ್ತರ ಪ್ರದೇಶದ(Uttar Pradesh) ಪ್ರಯಾಗರಾಜ್ನಲ್ಲಿ(Prayagraj) ಸಂಭವಿಸಿರುವ ಕಾಲ್ತುಳಿತದಲ್ಲಿ ಕರ್ನಾಟಕದ ಒಟ್ಟು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ (Maha Kumbh 2025) ಮೌನಿ ಅಮಾವಾಸ್ಯೆಯ (Mauni Amavasya) ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿದೆ. ಭೀಕರ ದುರಂತರದಲ್ಲಿ 15 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಬೆಳಗಾವಿಯ ತಾಯಿ ಮತ್ತು ಮಗಳು ಸೇರಿದ್ದಾರೆ. ಜತೆ ಇನ್ಜೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅದೇ ರೀತಿ ಶಿವಾಜಿನಗರ ಒಬ್ಬರು ಮೃತಪಟ್ಟಿದ್ದಾರೆ ಎಂಬುದಾಗಿ ಮಾಹಿತಿ ಬಂದಿದೆ. ನೂರಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದುಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತ್ರಿವೇಣಿ ಸಂಗಮದಲ್ಲಿ ಮಧ್ಯರಾತ್ರಿ 2.30ರ ವೇಳೆಗೆ ಮಾತಿನ ಚಕಮಕಿ, ನೂಕಾಟ- ತಳ್ಳಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳಕ್ಕೆ ರಕ್ಷಣಾ ಪಡೆಗಳು ಧಾವಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. 'ಎರಡನೇ ಶಾಹಿ ಸ್ನಾನ'ದ ದಿನವಾದ ಮೌನಿ ಅಮಾವಾಸ್ಯೆಯಂದು ಘಾಟ್ಗಳು ಮತ್ತು ತ್ರಿವೇಣಿ ಸಂಗಮದಲ್ಲಿ ಮಂಗಳವಾರದಿಂದಲೇ ಭಾರಿ ಸಂಖ್ಯೆ ಜನರು ಜಮಾಯಿಸಿದ್ದರು. ಅವರನ್ನು ನಿರ್ವಹಿಸುವುದು ಅಲ್ಲಿನ ಆಡಳಿತಕ್ಕೆ ಕಷ್ಟವಾಯಿತು. ಬುಧವಾರ ಪವಿತ್ರ ಸ್ನಾನ ಮಾಡಲು ಕುಂಭಮೇಳಕ್ಕೆ ಕನಿಷ್ಠ 10 ಕೋಟಿ ಮಂದಿ ಆಗಮಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಜನರನ್ನು ನಿಯಂತ್ರಣ ಮಾಡಲು ಸಾಧ್ಯವಾಗದೇ ಅಧಿಕಾರಿಗಳು ಅವರೆಲ್ಲರನ್ನೂ ವಾಪಸ್ ಕಳುಹಿಸುತ್ತಿದ್ದಾರೆ. ಮುರಿದ ತಡೆಗೋಡೆ ಏಕಾಏಕಿ ಜನರ ಸಂಖ್ಯೆ ಹೆಚ್ಚಾದ ಕಾರಣ ತಳ್ಳಾಟ ಆರಂಭವಾಯಿತು. ಹೀಗಾಗಿ ತಡೆಗೋಡೆ ಮುರಿದ ನಂತರ ಕಾಲ್ತುಳಿತ ಸಂಭವಿಸಿದೆ . "ಸಂಗಮ ಪ್ರದೇಶದಲ್ಲಿ ತಡೆಗೋಡೆ ಮುರಿದ ನಂತರ ಕೆಲವರು ಗಾಯಗೊಂಡರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು" ಎಂದು ಅವರು ತಿಳಿಸಿದ್ದಾರೆ. ಮಕರ ಸಂಕ್ರಾಂತಿಯಿಂದ ಕುಂಭಮೇಳ ನಡೆಯುವ ಅಷ್ಟೂ ದಿನ ನೀರಿನಲ್ಲಿ ಮಿಂದೇಳುವುದನ್ನು ‘ಪವಿತ್ರ’ ಎಂದು ಭಾವಿಸಲಾಗುತ್ತದೆ. ಆದರೆ ಅಮೃತ ಸ್ನಾನದ (ಶಾಹಿ ಸ್ನಾನ) ದಿನಗಳನ್ನು ವಿಶೇಷವಾದ ದಿನಗಳೆಂದು ಎಂದು ಪರಿಗಣಿಸಲಾಗುತ್ತದೆ.