AR Rahman: ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ದೀಢೀರ್ ಆಸ್ಪತ್ರೆಗೆ ದಾಖಲು, ಏನಾಯಿತು ಅವರಿಗೆ?

AR Rahman: ಪ್ರಸ್ತುತ ರೆಹಮಾನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ವೈದ್ಯರು ಇಸಿಜಿ ಮತ್ತು ಎಕೋ ಪರೀಕ್ಷೆಗಳನ್ನು ನಡೆಸಿದ್ದಾರೆ. ಬೆಳಗ್ಗೆ 7:30 ಗಂಟೆಗೆ ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.;

Update: 2025-03-16 04:58 GMT

ಎ. ಆರ್​. ರಹಮಾನ್​.

ಸುಪ್ರಸಿದ್ಧ ಸಂಗೀತ ನಿರ್ದೇಶಕ ಮತ್ತು ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರು ಭಾನುವಾರ ಬೆಳಗ್ಗೆ ದಿಢೀರನೆ ಎದೆನೋವು ಅನುಭವಿಸಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಿನ ಜಾವದಲ್ಲಿ ರೆಹಮಾನ್ ಅವರು ಎದೆನೋವಿನ ಸಮಸ್ಯೆ ಎದುರಿಸುವ ಬಗ್ಗೆ ತಿಳಿಸಿದ ನಂತರ, ಅವರನ್ನು ತಕ್ಷಣ ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರಸ್ತುತ ರೆಹಮಾನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ವೈದ್ಯರು ಇಸಿಜಿ ಮತ್ತು ಎಕೋ ಪರೀಕ್ಷೆಗಳನ್ನು ನಡೆಸಿದ್ದಾರೆ. ಬೆಳಗ್ಗೆ 7:30 ಗಂಟೆಗೆ ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದುಬಂದಿದೆ. ವೈದ್ಯರು ಆ್ಯಂಜಿಯೋಗ್ರಾಂ ಪರೀಕ್ಷೆ ನಡೆಸಬಹುದು ಎಂದು ಆಸ್ಪತ್ರೆಯ ಉನ್ನತ ಮೂಲಗಳು ತಿಳಿಸಿವೆ. ಚೆನ್ನೈನ ಅಪೋಲೊ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್​ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಭಾರತೀಯ ಸಿನಿಮಾ ಉದ್ಯಮದಲ್ಲಿ ಸಂಗೀತ ನಿರ್ದೇಶಕ ಮತ್ತು ಸಂಯೋಜಕರಾಗಿ ಎ.ಆರ್. ರೆಹಮಾನ್ ಅವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಾಡುಗಾರ ಮತ್ತು ಸಾಹಿತ್ಯ ರಚನಾಕಾರರಾಗಿಯೂ ಅವರು ಖ್ಯಾತಿ ಗಳಿಸಿದ್ದಾರೆ. 'ಸ್ಲಮ್ಡಾಗ್ ಮಿಲಿಯನೇರ್' ಚಲನಚಿತ್ರಕ್ಕೆ ಸಂಗೀತ ನೀಡಿದ್ದಕ್ಕಾಗಿ ಅವರಿಗೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಇದರ ಜೊತೆಗೆ, ಸಂಗೀತ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಮಿ ಪ್ರಶಸ್ತಿಯೂ ಅವರಿಗೆ ಸಂದಿದೆ.

Tags:    

Similar News