DELHI CM RACE | ದೆಹಲಿ ನೂತನ ಸಿಎಂ ಆಗಿ ಆತಿಶಿ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್

Update: 2024-09-17 07:06 GMT

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಬದಲಿಯಾಗಿ ಎಎಪಿ ನಾಯಕಿ ಮತ್ತು ಸಚಿವೆ ಆತಿಶಿ ಮರ್ಲೇನಾ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಈ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕೃತ ಘೋಷಣೆ ಮಾಡಿಲ್ಲ. ಆದರೆ, ಆತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮುಂಜಾನೆ ಚುನಾಯಿತರಾಗಿದ್ದಾರೆ. 

ಕೇಜ್ರಿವಾಲ್ ಅವರು ರಾಜೀನಾಮೆ ಸಲ್ಲಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಸಂಜೆ 4.30 ಕ್ಕೆ ಭೇಟಿಯಾಗುವ ನಿರೀಕ್ಷೆಯಿದೆ. 

ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಎರಡು ದಿನಗಳ ನಂತರ ಕೇಜ್ರಿವಾಲ್ ಅವರು ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು. ಜನರು ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡಿದ ಬಳಿಕ ಸಿಎಂ ಕುರ್ಚಿ ಮೇಲೆ ಕೂರುತ್ತೇನೆ ಎಂದು ಹೇಳಿದ್ದರು. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ನವೆಂಬರ್‌ನಲ್ಲಿ ದಿಲ್ಲಿಯಲ್ಲಿ ಚುನಾವಣೆ ನಡೆಸಬೇಕೆಂದು ಕೋರಿದರು.

ದೆಹಲಿ ಅಸೆಂಬ್ಲಿಯ ಅವಧಿ ಫೆಬ್ರವರಿ 23, 2025 ರಂದು ಕೊನೆಗೊಳ್ಳುತ್ತದೆ.

Tags:    

Similar News