ಫೆಬ್ರವರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ, ರಾಜ್ಯಾಧ್ಯಕ್ಷ ಬದಲಾವಣೆಯೂ ಇದೆಯೇ?

ಪ್ರಸ್ತುತ ಬಿಜೆಪಿಯ ಆಂತರಿಕ ಚುನಾವಣೆ ನಡೆಯುತ್ತಿದೆ. ಜನವರಿ ಮಧ್ಯದ ವೇಳೆಗೆ ಅರ್ಧಕ್ಕಿಂತ ಹೆಚ್ಚು ರಾಜ್ಯ ಘಟಕಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅಲ್ಲಿಂದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ.

Update: 2024-12-17 08:31 GMT
ಸಾಂಧರ್ಭಿಕ ಚಿತ್ರ.

ಹಾಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಸ್ಥಾನಕ್ಕೆ ಹೊಸಬರ ನೇಮಕ 2025ರ ಫೆಬ್ರವರಿ ಅಂತ್ಯದ ವೇಳೆಗೆ ನಡೆಯಲಿರುವ ಸಾಧ್ಯತೆಗಳಿವೆ. ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ಈ ಕುರಿತು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಮೊದಲು ರಾಜ್ಯ ಘಟಕಗಳಿಗೆ ಸಾಂಸ್ಥಿಕ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿಯೂ ಚುನಾವಣೆ ನಡೆಯಬಹುದೇ ಹಾಲಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರ ಸ್ಥಾನಕ್ಕೆ ಇನ್ನೊಬ್ಬರು ಆಯ್ಕೆಯಾಗುವರೇ ಎಂಬ ಚರ್ಚೆಗಳು ಆರಂಭಗೊಂಡಿವೆ.

ಪ್ರಸ್ತುತ ಬಿಜೆಪಿಯ ಆಂತರಿಕ ಚುನಾವಣೆ ನಡೆಯುತ್ತಿದೆ. ಜನವರಿ ಮಧ್ಯದ ವೇಳೆಗೆ ಅರ್ಧಕ್ಕಿಂತ ಹೆಚ್ಚು ರಾಜ್ಯ ಘಟಕಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅಲ್ಲಿಂದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ.

ಬಿಜೆಪಿಯ ರಾಜ್ಯ ಘಟಕದ ಶೇಕಡಾ 60 ರಷ್ಟು ಅಧ್ಯಕ್ಷರ ಅಧಿಕಾರಾವಧಿ ಮುಗಿದಿದೆ. ಮುಂದಿನ ತಿಂಗಳ ಮಧ್ಯದ ವೇಳೆಗೆ ಅವರ ಉತ್ತಾಧಿಕಾರಿಗಳು ಆಯ್ಕೆಯಾಗಲಿದ್ದಾರೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುವ ಮೊದಲು ಕನಿಷ್ಠ ಅರ್ಧದಷ್ಟು ರಾಜ್ಯ ಘಟಕಗಳಲ್ಲಿ ಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಬಿಜೆಪಿಯ ಬೈಲಾ ಹೇಳುತ್ತದೆ.

"ಫೆಬ್ರವರಿ ಅಂತ್ಯದ ವೇಳೆಗೆ ಹೊಸ ಬಿಜೆಪಿ ಅಧ್ಯಕ್ಷರು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ" ಎಂದು ಅವರು ಹೇಳಿದರು.

ಹೊಸ ಬಿಜೆಪಿ ಅಧ್ಯಕ್ಷರು ಪ್ರಸ್ತುತ ಕೇಂದ್ರ ಸಚಿವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಸರ್ಕಾರದಿಂದ ಅಥವಾ ಸಂಸ್ಥೆಯಿಂದಲೇ ಆಗಬೇಕು ಎಂಬ ನಿಖರ ಸೂಚನೆ ಇಲ್ಲ. ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಹೇಳಿದರು.

ಕೇಂದ್ರ ಆರೋಗ್ಯ ಸಚಿವರೂ ಆಗಿರುವ ನಡ್ಡಾ ಅವರು 2020ರ ಫೆಬ್ರವರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಧ್ಯಕ್ಷರ ಅಧಿಕಾರಾವಧಿ ಮೂರು ವರ್ಷಗಳಾಗಿದ್ದರೂ, 2024ರ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವರಿಗೆ ವಿಸ್ತರಣೆ ನೀಡಲಾಗಿತ್ತು. ಚುನಾವಣೆಯಲ್ಲ ಮೋದಿ ನೇತೃತ್ವದ ಎನ್​ಡಿಎ ಅಧಿಕಾರಕ್ಕೆ ಬಂದಿತ್ತು. 

Tags:    

Similar News