ಬಿಹಾರ ಚುನಾವಣೆ: ಬಿಜೆಪಿಯಿಂದ ಎಲ್ಲಾ 101 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮ

ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷಕ್ಕೆ 29 ಸ್ಥಾನಗಳು ಹಂಚಿಕೆಯಾಗಿವೆ.

Update: 2025-10-16 04:55 GMT

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಎಲ್ಲಾ 101 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಬುಧವಾರ ಸಂಜೆ 18 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ತನಗೆ ಹಂಚಿಕೆಯಾಗಿದ್ದ ಎಲ್ಲಾ ಸ್ಥಾನಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.

ಈ ಬಾರಿಯ ಚುನಾವಣೆಯಲ್ಲಿ ಖ್ಯಾತ ಗಾಯಕಿ ಮೈಥಿಲಿ ಠಾಕೂರ್ ಅವರು ಅಲೀನಗರ ಕ್ಷೇತ್ರದಿಂದ ಮತ್ತು ಮಾಜಿ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ಅವರು ಬಕ್ಸರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ವಿಶೇಷವಾಗಿದೆ. ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ (ತಾರಾಪುರ್) ಮತ್ತು ವಿಜಯ್ ಕುಮಾರ್ ಸಿನ್ಹಾ (ಲಖಿಸರಾಯ್) ಅವರ ಹೆಸರುಗಳು ಮೊದಲ ಪಟ್ಟಿಯಲ್ಲೇ ಘೋಷಣೆಯಾಗಿದ್ದವು.

ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷಕ್ಕೆ 29 ಸ್ಥಾನಗಳು ಹಂಚಿಕೆಯಾಗಿವೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.

Tags:    

Similar News