Waqf Asset Issue | ಕಾಂಗ್ರೆಸ್‌ನಿಂದ ವೋಟ್‌ ಬ್ಯಾಂಕ್‌ ರಾಜಕಾರಣ: ಬಿಜೆಪಿ ಹಿರಿಯ ನಾಯಕ ರವಿಶಂಕರ್‌ ಪ್ರಸಾದ್‌ ಆರೋಪ

ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಇಂತಹ ದುಸ್ಸಾಹಕ್ಕೆ ಕೈ ಹಾಕಿದೆ. ಬಿಜೆಪಿಯು ಇಂತಹ ಪ್ರಯತ್ನಗಳ ವಿರುದ್ಧ ಉಗ್ರ ಹೋರಾಟ ನಡೆಸಲಿದೆ ಎಂದು ಬಿಜೆಪಿ ನಾಯಕ ರವಿಶಂಕರ ಪ್ರಸಾದ್‌ ಹೇಳಿದ್ದಾರೆ.;

Update: 2024-11-01 12:37 GMT

ವೋಟ್‌ ಬ್ಯಾಂಕ್ ರಾಜಕಾರಣಕ್ಕಾಗಿ ಕರ್ನಾಟಕದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರೈತರು, ಮಠ- ಮಂದಿರಗಳ ಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಕರ್ನಾಟಕದ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಆಸ್ತಿ ಅತಿಕ್ರಮಣ ಮಾಡಿದ ಆರೋಪದ ಮೇಲೆ ನೋಟಿಸ್‌ ನೀಡಲಾಗುತ್ತಿದೆ. ಕಳೆದ ಮೂರು ವಾರಗಳಲ್ಲಿ ರೈತರ 44 ಆಸ್ತಿಗಳಿಗೆ ನೋಟಿಸ್ ಬಂದಿವೆ ಎಂದು ದೂರಿದರು. ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಇಂತಹ ದುಸ್ಸಾಹಕ್ಕೆ ಕೈ ಹಾಕಿದೆ. ಬಿಜೆಪಿಯು ಇಂತಹ ಪ್ರಯತ್ನಗಳ ವಿರುದ್ಧ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ವಕ್ಫ್‌ ವಿವಾದ ತೀವ್ರವಾಗುತ್ತಿದ್ದಂತೆ ಸಚಿವ ಎಂ.ಬಿ.ಪಾಟೀಲ್ ಅವರು ಗೆಜೆಟ್‌ ಅಧಿಸೂಚನೆ ತಪ್ಪಿನಿಂದಾಗಿದೆ ಎಂದು ದೂಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಣತಿಯಂತೆ ನೋಟಿಸ್‌ ನೀಡಲಾಗುತ್ತಿದೆ ಎಂದು ಅಲ್ಲಿನ ವಕ್ಫ್‌ ಖಾತೆ ಸಚಿವರೇ ಹೇಳಿದ್ದಾರೆ. ಕೂಡಲೇ ಇಂತಹ ಪ್ರಯತ್ನಗಳನ್ನು ಕಾಂಗ್ರೆಸ್‌ ನೇತೃತ್ವದ ಸರ್ಕಾರ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

Tags:    

Similar News