ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ: ಪಾಕ್ ಕೃತ್ಯವನ್ನು ಖಂಡಿಸಿದ ಪ್ರಧಾನಿ ಮೋದಿ

ಭಾರತ ಮತ್ತು ಪಾಕಿಸ್ತಾನದ ನಡುವೆ ಸಂವಾದ ನಡೆದರೆ, ಅದು ಕೇವಲ ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮರಳಿ ಪಡೆಯುವ ಬಗ್ಗೆ ಮಾತ್ರ ಆಗಿರುತ್ತದೆ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.;

Update: 2025-05-12 15:38 GMT

ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಭಾರತದ ದೃಢ ನಿಲುವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, "ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಸಾಗಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಈ ಮೂಲಕ ಪಾಕ್​ ಜತೆಗಿನ ಸಂಬಂಧ ಸುಧಾರಣೆಗೆ ಭಯೋತ್ಪಾದನೆಯ ನಿರ್ಮೂಲನೆಯ ಷರತ್ತು ವಿಧಿಸಿದ್ದಾರೆ.


Full View

'ಆಪರೇಷನ್ ಸಿಂದೂರ್' ಕಾರ್ಯಾಚರಣೆಯ ನಂತರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ತಮ್ಮ ಮೊದಲ ಭಾಷಣದಲ್ಲಿ ಪ್ರಧಾನಿ ಈ ಮಹತ್ವದ ಹೇಳಿಕೆ ನೀಡಿದ್ದಾರೆ. ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ರಾಜತಾಂತ್ರಿಕ ಕ್ರಮವಾಗಿ ಇಂಡಸ್ ವಾಟರ್ ಟ್ರೀಟಿ (ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ)ಯನ್ನು ಸ್ಥಗಿತಗೊಳಿಸಿತ್ತು. ಈ ಕುರಿತು ಮಾತನಾಡಿದ ಪ್ರಧಾನಿ ಮೋದಿ, "ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ" ಎಂದು ಹೇಳಿಕೆ ನೀಡಿದ್ದಾರೆ. ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಸಾಗುವಂತಿಲ್ಲ, ರಕ್ತ ಮತ್ತು ನೀರು ಒಟ್ಟಿಗೆ ಹರಿಯುವಂತಿಲ್ಲ ಎಂದು ಅವರು ಒತ್ತಿ ಹೇಳಿದರು.

ಭಾರತ ಮತ್ತು ಪಾಕಿಸ್ತಾನದ ನಡುವೆ ಸಂವಾದ ನಡೆದರೆ, ಅದು ಕೇವಲ ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮರಳಿ ಪಡೆಯುವ ಬಗ್ಗೆ ಮಾತ್ರ ಆಗಿರುತ್ತದೆ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ. "ಭಾರತದ ನಿಲುವು ಸ್ಪಷ್ಟವಾಗಿದೆ, ಭಯೋತ್ಪಾದನೆ, ವ್ಯಾಪಾರ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ" ಎಂದು ಹೇಳುವ ಮೂಲಕ ಭಯೋತ್ಪಾದನೆಯು ವ್ಯಾಪಾರ ಸಂಬಂಧಗಳಿಗೆ ಅಡ್ಡಿ ಎಂಬುದನ್ನು ಅವರು ಸ್ಪಷ್ಟಪಡಿಸಿದರು.  

Tags:    

Similar News