ಬಜೆಟ್ 2024-25| ಜುಲೈ 23ಕ್ಕೆ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು 2024-25ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. ಜುಲೈ 22 ರಿಂದ ಆಗಸ್ಟ್ 12ರ ವರೆಗೆ ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.;

Update: 2024-07-06 13:57 GMT
ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು 2024-25ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. ಜುಲೈ 22 ರಿಂದ ಆಗಸ್ಟ್ 12ರ ವರೆಗೆ ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಕಿರಣ್‌ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2024ರ ಬಜೆಟ್ ಅಧಿವೇಶನಕ್ಕೆ ಅನುಮೋದನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮೂರನೇ ಅವಧಿಯಲ್ಲಿ ಮಂಡಿಸಿಲಿರುವ ಮೊದಲ ಬಜೆಟ್ ಇದಾಗಿದೆ. ಇದು ಅನೇಕ ಪ್ರಮುಖ ನಿರ್ಧಾರಗಳನ್ನು ಒಳಗೊಂಡಿರಲಿದೆ , ಬಜೆಟ್‌ ಮೇಲಿನ ನಿರೀಕ್ಷೆ ಹೆಚ್ಚಾಗಿದೆ .ಬಜೆಟ್‌ನಲ್ಲಿ ದೇಶದ ಪ್ರಮುಖ ಸಾಮಾಜಿಕ ಮತ್ತು ಆರ್ಥಿಕ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಏಪ್ರಿಲ್-ಜೂನ್‌ನಲ್ಲಿ ಲೋಕಸಭೆ ಚುನಾವಣೆ ನಡೆದ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಲಾಗಿತ್ತು . 

ಏಳನೇ ಬಾರಿ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಹಾಗೂ ದಾಖಲೆಯ ಏಳನೇ ಬಾರಿ ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ. ಈ ಹಿಂದೆ ಸಹ ಸತತ ಆರು ಬಾರಿ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದರು. ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಕಳೆದ ಎರಡು ಅವಧಿಯಲ್ಲೂ ಬಿಜೆಪಿ ಸ್ವತಂತ್ರ್ಯವಾಗಿ ಅಧಿಕಾರ ನಡೆಸಿತ್ತು. ಈ ಬಾರಿ ಮಿತ್ರ ಪಕ್ಷಗಳ ಸಹಾಯದಿಂದ ಅಧಿಕಾರ ನಡೆಸುತ್ತಿದೆ. ಇನ್ನು ಈ ಬಾರಿ ಆದಾಯ ತೆರಿಗೆ ಮಿತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರೀ ನಿರೀಕ್ಷೆ ಇದೆ. ಮಿತ್ರ ಪಕ್ಷಗಳು ಸಹ ಬೇಡಿಕೆಗಳನ್ನು ಇರಿಸಿವೆ ಎಂದು ವರದಿಯಾಗಿದೆ.  

Tags:    

Similar News