ಹೊಸ ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯ ತೆರೆಯಲು ಕೇಂದ್ರದ ಸಂಪುಟ ಒಪ್ಪಿಗೆ
ಈ ಹೊಸ ಕೇಂದ್ರೀಯ ವಿದ್ಯಾಲಯಗಳ ಪ್ರಾರಂಭವು ದೇಶಾದ್ಯಂತ 82,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶವನ್ನು ಒದಗಿಸಲಿದೆ.
85 ಹೊಸ ಕೇಂದ್ರೀಯ ವಿದ್ಯಾಲಯಗಳು ಮತ್ತು 28 ಹೊಸ ನವೋದಯ ವಿದ್ಯಾಲಯಗಳನ್ನು ಆರಂಭಿಸಲು ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಅದೇ ರೀತಿ ಒಂದು ಕೇಂದ್ರೀಯ ವಿದ್ಯಾಲಯವನ್ನು ವಿಸ್ತರಿಸಲು ಅನುಮೋದನೆ ಕೊಟ್ಟಿದೆ.
ಈ ಹೊಸ ಕೇಂದ್ರೀಯ ವಿದ್ಯಾಲಯಗಳ ಪ್ರಾರಂಭವು ದೇಶಾದ್ಯಂತ 82,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶವನ್ನು ಒದಗಿಸಲಿದೆ.
2025-26 ರಿಂದ 8 ವರ್ಷಗಳ ಅವಧಿಯಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಒಂದು ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೆ ಒಟ್ಟು 5,872.08 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ಪ್ರಸ್ತುತ, ಮಾಸ್ಕೋ, ಕಠ್ಮಂಡು ಮತ್ತು ಟೆಹ್ರಾನ್ ಸೇರಿದಂತೆ 1,256 ಕ್ರಿಯಾತ್ಮಕ ಕೇಂದ್ರೀಯ ವಿದ್ಯಾಲಯಗಳಿವೆ ಮತ್ತು ಈ ಶಾಲೆಗಳಲ್ಲಿ 13.56 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.