Kolkata rape-murder | ಸಂದೀಪ್ ಘೋಷ್ ವಿರುದ್ಧ ಸಿಬಿಐ ಪ್ರಕರಣ ದಾಖಲು

ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಅವರು ಘೋಷ್ ಅಧಿಕಾರಾವಧಿಯಲ್ಲಿ ನಡೆದ ಹಣಕಾಸು ಅವ್ಯವಹಾರದ ಕುರಿತು ಜಾರಿ ನಿರ್ದೇಶನಾಲಯ (ಇಡಿ)ದ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದರು.

Update: 2024-08-24 12:53 GMT

ಕಲ್ಕತ್ತಾ ಹೈಕೋರ್ಟ್‌ನ ಏಕ ಪೀಠದ ನಿರ್ದೇಶನದ ಮೇರೆಗೆ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳ ಎಫ್‌ಐಆರ್ ದಾಖಲಿಸಿದೆ.

ಶನಿವಾರ (ಆಗಸ್ಟ್ 24) ನಿಜಾಮ್ ಪ್ಯಾಲೇಸ್‌ನಲ್ಲಿರುವ ಸಿಬಿಐ ಕಚೇರಿಗೆ ತೆರಳಿದ್ದ ಎಸ್‌ಐಟಿ ತಂಡ, ಕೋರ್ಟ್‌ ಆದೇಶದಂತೆ ಸಂಬಂಧಿತ ದಾಖಲೆಗಳನ್ನು ಹಸ್ತಾಂತರಿಸಿತು. ಆನಂತರ ಸಿಬಿಐ ಎಫ್‌ಐಆರ್ ದಾಖಲಿಸಿ, ಆಲಿಪುರ್ ಸಿಜೆಎಂ ನ್ಯಾಯಾಲಯಕ್ಕೆ ಪ್ರತಿಯನ್ನು ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. 

ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಅವರು ಘೋಷ್ ಅಧಿಕಾರಾವಧಿಯಲ್ಲಿ ನಡೆದ ಹಣಕಾಸು ಅವ್ಯವಹಾರದ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ)ದ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಮೇರೆಗೆ ಹೈಕೋರ್ಟ್ ತನಿಖೆಗೆ ನಿರ್ದೇಶನ ನೀಡಿದೆ. 

ಮೂರು ವಾರಗಳಲ್ಲಿ ತನಿಖೆಯ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ಸೂಚಿಸಿದೆ. ನ್ಯಾಯಾಲಯ ಸೆಪ್ಟೆಂಬರ್ 17ರಂದು ವರದಿ ಪರಿಶೀಲನೆಗೆ ವಿಚಾರಣೆ ನಿಗದಿಪಡಿಸಿದೆ. 

Tags:    

Similar News