ಕೊಬ್ಬರಿ ಬೆಳೆಗಾರರಿಗೆ ಕೇಂದ್ರದ ಬಂಪರ್ ಕೊಡುಗೆ: ಬೆಂಬಲ ಬೆಲೆ ಏರಿಕೆ, ಕ್ವಿಂಟಾಲ್‌ಗೆ ಹೊಸ ದರ ಪ್ರಕಟ

ಸರ್ಕಾರದ ಹೊಸ ಘೋಷಣೆಯಂತೆ, ಮಿಲ್ಲಿಂಗ್ ಕೊಬ್ಬರಿಯ ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಂಟಲ್‌ಗೆ 445 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಮಿಲ್ಲಿಂಗ್ ಕೊಬ್ಬರಿಯ ಹೊಸ ದರ ಪ್ರತಿ ಕ್ವಿಂಟಲ್‌ಗೆ 12,027 ರೂಪಾಯಿಗಳಿಗೆ ತಲುಪಿದೆ.

Update: 2025-12-13 04:31 GMT

ಸಾಂದರ್ಭಿಕ ಚಿತ್ರ 

Click the Play button to listen to article

ಸಂಕಷ್ಟದಲ್ಲಿರುವ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದ್ದು, 2026ರ ಸಾಲಿಗೆ ಅನ್ವಯವಾಗುವಂತೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ (CCEA) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ರೈತರಿಗೆ ತಮ್ಮ ಬೆಳೆಗೆ ಉತ್ತಮ ಮಾರುಕಟ್ಟೆ ದರ ಸಿಗುವ ನಿರೀಕ್ಷೆ ಮೂಡಿದೆ.

ಕ್ವಿಂಟಾಲ್‌ಗೆ ಎಷ್ಟು ಏರಿಕೆ?

ಸರ್ಕಾರದ ಹೊಸ ಘೋಷಣೆಯಂತೆ, ಮಿಲ್ಲಿಂಗ್ ಕೊಬ್ಬರಿಯ ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಂಟಲ್‌ಗೆ 445 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಮಿಲ್ಲಿಂಗ್ ಕೊಬ್ಬರಿಯ ಹೊಸ ದರ ಪ್ರತಿ ಕ್ವಿಂಟಲ್‌ಗೆ 12,027 ರೂಪಾಯಿಗಳಿಗೆ ತಲುಪಿದೆ. ಅದೇ ರೀತಿ, ಉಂಡೆ ಕೊಬ್ಬರಿಯ (Ball Copra) ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್‌ಗೆ 400 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದ್ದು, ಇದರ ಪರಿಷ್ಕೃತ ದರವು 12,500 ರೂಪಾಯಿಗಳಿಗೆ ನಿಗದಿಯಾಗಿದೆ. ಈ ದರ ಪರಿಷ್ಕರಣೆಯು ಮುಂಬರುವ ಹಂಗಾಮಿನಲ್ಲಿ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದೇನು?

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ತೆಂಗು ಬೆಳೆಗಾರರಿಗೆ ಖಚಿತವಾದ ಮತ್ತು ಲಾಭದಾಯಕ ಬೆಲೆ ಸಿಗುವಂತಾಗಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಮಾರುಕಟ್ಟೆಯಲ್ಲಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಮತ್ತು ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (CACP) ಶಿಫಾರಸಿನ ಮೇರೆಗೆ, ಕೊಬ್ಬರಿಯ 'ನ್ಯಾಯಯುತ ಮತ್ತು ಸರಾಸರಿ ಗುಣಮಟ್ಟ'ವನ್ನು ಆಧರಿಸಿ ಈ ದರವನ್ನು ನಿಗದಿಪಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಖರೀದಿಗೆ ನೋಡಲ್ ಏಜೆನ್ಸಿಗಳ ನೇಮಕ

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉತ್ಪನ್ನಗಳನ್ನು ಖರೀದಿಸಲು ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (NAFED) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಕೇಂದ್ರ ನೋಡಲ್ ಏಜೆನ್ಸಿಗಳಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿವೆ. ಮಾರುಕಟ್ಟೆಯಲ್ಲಿ ದರ ಕುಸಿತವಾದಾಗ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಉತ್ಪನ್ನಗಳನ್ನು ಖರೀದಿಸಲು ಈ ಸಂಸ್ಥೆಗಳು ನೆರವಾಗಲಿವೆ ಎಂದು ಸಚಿವರು ಮಾಹಿತಿ ನೀಡಿದರು.

Tags:    

Similar News