14 ಜನರಿಗೆ ಪೌರತ್ವ ಪ್ರಮಾಣಪತ್ರ ಹಸ್ತಾಂತರ
ಇಂದು ದೆಹಲಿಯಲ್ಲಿ 300 ಜನರಿಗೆ ಸಿಎಎ ಅಡಿಯಲ್ಲಿ ಪೌರತ್ವ ನೀಡಲಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.;
By : The Federal
Update: 2024-05-15 13:14 GMT
ಕೇಂದ್ರ ಸರ್ಕಾರವು 14 ಮಂದಿಗೆ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ಬುಧವಾರ (ಮೇ 15) ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು 14 ಜನರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು ಎಂದು ವಕ್ತಾರರು ತಿಳಿಸಿದ್ದಾರೆ.
ʻಇಂದು ದೆಹಲಿಯಲ್ಲಿ 300 ಜನರಿಗೆ ಸಿಎಎ ಅಡಿಯಲ್ಲಿ ಪೌರತ್ವ ನೀಡಲಾಗುತ್ತಿದೆ. ಸಿಎಎ ದೇಶದ ಕಾನೂನುʼ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾಗಿ ಬಂದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಡಿಸೆಂಬರ್ 2019 ರಲ್ಲಿ ಸಿಎಎ ಕಾನೂನು ಜಾರಿಗೊಳಿಸಲಾಯಿತು. ಆನಂತರ ರಾಷ್ಟ್ರಪತಿಯವರ ಒಪ್ಪಿಗೆ ಸಿಕ್ಕಿತು. ಆದರೆ, ನಾಲ್ಕು ವರ್ಷಗಳ ವಿಳಂಬದ ನಂತರ 2024ರ ಮಾರ್ಚ್ 11 ರಂದು ನಿಯಮಗಳನ್ನು ಪ್ರಕಟಿಸಲಾಯಿತು.