ಕೇಂದ್ರದ ಮಾಜಿ ಸಚಿವ ಇಳಂಗೋವನ್ ನಿಧನ
ಈರೋಡ್ ಪೂರ್ವ ಕ್ಷೇತ್ರದ ಶಾಸಕರಾಗಿರುವ ಅವರು ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ನವೆಂಬರ್ 11 ರಂದು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
By : The Federal
Update: 2024-12-14 08:08 GMT
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಇವಿಕೆಎಸ್ ಇಳಂಗೋವನ್ ಅವರು ವಯೋಸಹಜ ಕಾಯಿಲೆಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಈರೋಡ್ ಪೂರ್ವ ಕ್ಷೇತ್ರದ ಶಾಸಕರಾಗಿರುವ ಅವರು ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ನವೆಂಬರ್ 11 ರಂದು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
"ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಅವರು ಇಂದು ನಿಧನರಾದರು" ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇಳಂಗೋವನ್ ಅವರ ನಿಧನವನ್ನು "ದೊಡ್ಡ ನಷ್ಟ" ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ ಸೆಲ್ವಪೆರುಂತಗೈ ಬಣ್ಣಿಸಿದ್ದಾರೆ.
"ಅವರು ನೇರನುಡಿಯ ವ್ಯಕ್ತಿಯಾಗಿದ್ದರು. ಅವರ ಸಾವು ಅವರ ಕುಟುಂಬಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮತ್ತು ವೈಯಕ್ತಿಕವಾಗಿ ನನಗೆ ಭರಿಸಲಾಗದ ನಷ್ಟ " ಎಂದು ಅವರು ಹೇಳಿದರು.