Covid Cases| ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ

ದೇಶದಲ್ಲಿ ಸಕ್ರೀಯ ಕೋವಿಡ್ ಪ್ರಕರಣಗಳ ಸಂಖ್ಯೆ 257 ಕ್ಕೆ ತಲುಪಿದೆ. ಕೇರಳದಲ್ಲಿ ಅತಿ ಹೆಚ್ಚು 95 ಪಾಸಿಟಿವ್ ಪ್ರಕರಣಗಳಿವೆ. ತಮಿಳುನಾಡಿನಲ್ಲಿ 66, ಮಹಾರಾಷ್ಟ್ರದಲ್ಲಿ 56 ಮತ್ತು ಕರ್ನಾಟಕದಲ್ಲಿ 13 ಸಕ್ರಿಯ ಪ್ರಕರಣಗಳು ದಾಖಲಾಗಿವೆ.;

Update: 2025-05-21 09:11 GMT
ಕೋವಿಡ್‌

ಕೊರೊನಾ ವೈರಸ್ ಪ್ರಕರಣಗಳು ಮತ್ತೆ ಉಲ್ಬಣಿಸುತ್ತಿವೆ. ಸಿಂಗಾಪುರ, ಹಾಂಗ್ ಕಾಂಗ್ ಮತ್ತು ಭಾರತದ ಕೆಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.  

ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 257 ಕ್ಕೆ ತಲುಪಿದೆ. ಕೇರಳದಲ್ಲಿ ಅತಿ ಹೆಚ್ಚು 95 ಪಾಸಿಟಿವ್ ಪ್ರಕರಣಗಳಿವೆ. ತಮಿಳುನಾಡಿನಲ್ಲಿ 66, ಮಹಾರಾಷ್ಟ್ರದಲ್ಲಿ 56 ಮತ್ತು ಕರ್ನಾಟಕದಲ್ಲಿ 13 ಸಕ್ರಿಯ ಪ್ರಕರಣಗಳಿವೆ. ಈ ಮಧ್ಯೆ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಸೋಮವಾರ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿರುವುದನ್ನು ಮಹರಾಷ್ಟ್ರ ಆರೋಗ್ಯ ಇಲಾಖೆ ಖಚಿತಪಡಿಸಿದೆ.  

ಭಾರತದ ಪರಿಸ್ಥಿತಿ ಹೇಗಿದೆ?

ಭಾರತದಲ್ಲಿ ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದೆ. ಆರೋಗ್ಯ ಸಚಿವಾಲಯದ ಪ್ರಕಾರ, 2024 ಮೇ 19ರವರೆಗೆ ದೇಶದಲ್ಲಿ ಕೇವಲ 257 ಸಕ್ರಿಯ ಪ್ರಕರಣಗಳು ಕಂಡುಬಂದಿವೆ. ಆತಂಕಕಾರಿ ವಿಷಯವೆಂದರೆ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರಕರಣಗಳು ಏರಿಕೆಯಾಗುತ್ತಿವೆ.  

ಜನರು ಮತ್ತೆ ಕೊರೊನಾ ಸಂಬಂಧಿತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕೆಂದು ಸರ್ಕಾರ ಮತ್ತು ವೈದ್ಯರು ಸಲಹೆ ನೀಡಿದ್ದಾರೆ.  

ನಟಿಗೂ ತಗುಲಿದ ಸೋಂಕು  

ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ ಅವರು ಇತ್ತೀಚೆಗೆ ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.  ಏಷ್ಯಾದ ಸಿಂಗಾಪುರ, ಹಾಂಗ್ ಕಾಂಗ್, ಚೀನಾ ಮತ್ತು ಥೈಲ್ಯಾಂಡ್‌ನಲ್ಲಿ ಕೊರೊನಾವೈರಸ್ ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಈ ದೇಶಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಮೇ 1 ರಿಂದ ಮೇ 19 ರವರೆಗೆ ಸಿಂಗಾಪುರದಲ್ಲಿ 3000 ಜನರಲ್ಲಿ ಸೋಂಕು ಪತ್ತೆಯಾಗಿದೆ. ಏಪ್ರಿಲ್ ಕೊನೆಯ ವಾರದ ವೇಳೆಗೆ ಈ ಸಂಖ್ಯೆ 11,100 ಗಡಿ ದಾಟಿತ್ತು.  

ಅದೇ ರೀತಿ ಹಾಂಗ್ ಕಾಂಗ್‌ನಲ್ಲಿ 81 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 30 ಮಂದಿ ಮೃತಪಟ್ಟಿದ್ದಾರೆ. ಚೀನಾ ಮತ್ತು ಥೈಲ್ಯಾಂಡ್‌ನಲ್ಲೂ ಎಚ್ಚರಿಕೆ ನೀಡಲಾಗಿದೆ.  

Tags:    

Similar News