Delhi CM Atishi : ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಡೆಲ್ಲಿ ಸಿಎಂ ಆತಿಶಿ
Delhi CM Atishi : ರೋಹಿಣಿಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಬಿಜೆಪಿಯ ಬಿಧುರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಅತಿಶಿ. ಸ್ವಲ್ಪ ಸಮಯದ ಹಿಂದೆ ತಮ್ಮ ಉಪನಾಮ ಕೈಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದರು.;
ಬಿಜೆಪಿ ನಾಯಕ ರಮೇಶ್ ಬಿಧುರಿ ತಮ್ಮ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆ ಕುರಿತು ಸೋಮವಾರ ಪತ್ರಿಕಾಗೋಷ್ಠಿ ಕರೆದಿದ್ದ ದೆಹಲಿ ಸಿಎಂ ಆತಿಶಿ ಆ ಕುರಿತು ಮಾತನಾಡುವಾಗ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಕಲ್ಕಾಜಿ ಕ್ಷೇತ್ರದ ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಬಿಧುರಿ ತಮ್ಮ ವಿರುದ್ಧ ಅವಹೇಳನಕಾರಿ ಮಾತನಾಡಿದ್ದನ್ನು ಅವರು ಮಹಿಳೆಯರ ಮೇಲಿನ ದೌರ್ಜನ್ಯ ಎಂದು ಹೇಳಿದರು.
ಇತ್ತೀಚೆಗೆ ಆತಿಶಿ ಅವರು ತಮ್ಮ ಉಪನಾಮವನ್ನು ಬದಲಾಯಿಸಿಕೊಂಡಿದ್ದರು. ಮರ್ಲೆನಾ ಎಂಬುದನ್ನು ಸಿಂಗ್ ಎಂದು ಬದಲಾಯಿಸಿದ್ದರು. ಇದೇ ವಿಚಾರದ ಬಗ್ಗೆ ಮಾತನಾಡಿದ್ದ ಬಿಧುರಿ, ಡೆಲ್ಲಿ ಸಿಎಂ ಆತಿಶಿ ತಮ್ಮ ತಂದೆಯನ್ನು ಬದಲಾಯಿಸಿಕೊಂಡಿದ್ದಾರೆ ಎಂದು ಟೀಕೆ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.
ಬಿಧುರಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅತಿಶಿ, "ನಮ್ಮ ರಾಜಕೀಯ ಹೋರಾಟವು ಇಷ್ಟು ಕೆಳಮಟ್ಟಕ್ಕೆ ಇಳಿದಿರುವುದು ಆಘಾತಕಾರಿ. 10 ವರ್ಷಗಳ ಕಾಲ ಸಂಸದರಾಗಿದ್ದ ಅವರು ಕಲ್ಕಾಜಿ ಕ್ಷೇತ್ರಕ್ಕೆ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ತೋರಿಸಲಿ" ಎಂದು ಸವಾಲು ಹಾಕಿದರು. ಅವರು ತಮ್ಮ ಕೆಲಸದ ಆಧಾರದ ಮೇಲೆ ಮತಗಳನ್ನು ಕೇಳಬೇಕು, ನನ್ನ ತಂದೆಯನ್ನು ನಿಂದಿಸುವ ಮೂಲಕ ಅಲ್ಲ ಎಂದು ಅವರು ಹೇಳಿದರು.
ರೋಹಿಣಿಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಬಿಜೆಪಿಯ ಬಿಧುರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಅತಿಶಿ. ಸ್ವಲ್ಪ ಸಮಯದ ಹಿಂದೆ ತಮ್ಮ ಉಪನಾಮ ಕೈಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
"ಈ ಮರ್ಲೆನಾ (ಈ ಹಿಂದೆ ಅತಿಶಿ ಬಳಸುತ್ತಿದ್ದ ಉಪನಾಮ) ಸಿಂಗ್ ಆಗಿ ಮಾರ್ಪಟ್ಟು ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಭ್ರಷ್ಟ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಕೇಜ್ರಿವಾಲ್ ತಮ್ಮ ಮಕ್ಕಳಿಗೆ ಪ್ರಮಾಣ ಮಾಡಿದ್ದಾರೆ. ಮರ್ಲೆನಾ ತಂದೆಯರನ್ನು ಬದಲಾಯಿಸಿಕೊಂಡಿದ್ದಾರೆ" ಎಂದು ಬಿಧುರಿ ಹೇಳಿದ್ದರು.