ಬಿಭವ್ ಕುಮಾರ್ ಗೆ ನಾಲ್ಕು ದಿನ ನ್ಯಾಯಾಂಗಬಂಧನ

Update: 2024-05-24 12:52 GMT

ನವದೆಹಲಿ, ಮೇ 24: ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. 

ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಕುಮಾರ್ ಅವರು ಮೇ 13 ರಂದು ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದರು. ಮೇ 18 ರಂದು ಕುಮಾರ್ ಅವರನ್ನು ಬಂಧಿಸಲಾಗಿತ್ತು.ಅವರು ಶನಿವಾರದಿಂದ ಪೊಲೀಸ್ ಕಸ್ಟಡಿಯಲ್ಲಿದ್ದರು. 

ಕುಮಾರ್ ಅವರನ್ನು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿ ಪ್ರಾಸಿಕ್ಯೂಷನ್ ಮಾಡಿದ ಮನವಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಅನುಮತಿಸಿದರು.

Tags:    

Similar News