ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ, ಆರೋಪಿ ಬಂಧನ
ಹಲ್ಲೆ ಮಾಡಿದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.;
ರೇಖಾ ಗುಪ್ತಾ
ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸದಲ್ಲಿ ಇಂದು ಆಯೋಜಿಸಿದ್ದ ಜನಸ್ಪಂದನಾ ('ಜನ್ ಸುನ್ವೈ') ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆದಿದ ಘಟನೆ ನಡೆದಿದೆ.
ಕೂಡಲೇ ಹಲ್ಲೆ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ (ಆಗಸ್ಟ್ 20) ಬೆಳಿಗ್ಗೆ ಸಿವಿಲ್ ಲೈನ್ಸ್‌ನಲ್ಲಿರುವ ಸಿಎಂ ನಿವಾಸದಲ್ಲಿ ಅಹವಾಲು ಸಲ್ಲಿಸುವ ನೆಪದಲ್ಲಿ ಬಂದ ವ್ಯಕ್ತಿ ಹಲ್ಲೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿಗೆ ಆಘಾತ
ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಈ ವಿಷಯವನ್ನು ಖಚಿತಪಡಿಸಿದ್ದು, 'ಜನ್ ಸುನ್ವೈ' ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯ ಮೇಲಿನ ಹಲ್ಲೆಯನ್ನು ಖಂಡಿಸಿದ್ದಾರೆ.
"ಜನ್ ಸುನ್‌ವೈ ಸಮಯದಲ್ಲಿ ಮುಖ್ಯಮಂತ್ರಿ ಅವರು ಜನರ ಕುಂದುಕೊರತೆಗಳನ್ನು ಆಲಿಸುತ್ತಿದ್ದರು. ಒಬ್ಬ ವ್ಯಕ್ತಿ ಮುಂದೆ ಬಂದು ಸಿಎಂಗೆ ದಾಖಲೆ ನೀಡಲು ಪ್ರಯತ್ನಿಸಿದ. ಇದ್ದಕ್ಕಿದ್ದಂತೆ ಸಿಎಂ ಕೈ ಹಿಡಿದು ಅವರನ್ನು ಎಳೆಯಲು ಪ್ರಯತ್ನಿಸಿದ. ಸ್ಥಳದಲ್ಲಿ ಗದ್ದಲ ಉಂಟಾಯಿತು. ಆಗ ಜನರೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು ಎನ್ನಲಾಗಿದೆ. ಸಿಎಂ ರೇಖಾ ಗುಪ್ತ ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಆದರೆ, ಘಟನೆಯಿಂದ ಸಿಎಂ ಆಘಾತಕ್ಕೆ ಒಳಗಾಗಿದ್ದಾರೆ ಎಂದು ಎಂದು ಸಚ್‌ದೇವ ಹೇಳಿದರು.