Delhi Election Result 2025: ಸ್ಪಷ್ಟ ಬಹುಮತದತ್ತ ಬಿಜೆಪಿ ದಾಪುಗಾಲು
Delhi Election Result 2025: ಬಿಜೆಪಿಯು 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಆಡಳಿತಾರೂಢ ಆಪ್ ಕೇವಲ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಒಂದೇ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.;
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ (Delhi Election Result 2025) ಬಿಜೆಪಿಯು 27 ವರ್ಷದ ಬಳಿಕ ಅಧಿಕಾರ ಗದ್ದುಗೆ ಹಿಡಿಯಲು ಮುಂದಾಗಿದೆ. ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿಯು 55 ಕ್ಷೇತ್ರಗಳ ಪೈಕಿ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಸರಳ ಬಹುಮತದ ಸನಿಹ ತಲುಪಿದ್ದು, ಆಪ್ ಗೆ ಭಾರಿ ಮುಖಭಂಗ ಎದುರಾಗಿದೆ.
ಬಿಜೆಪಿಯು 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಆಡಳಿತಾರೂಢ ಆಪ್ ಕೇವಲ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಒಂದೇ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 70 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಅಧಿಕಾರದ ಗದ್ದುಗೆ ಹಿಡಿಯಲು ಮ್ಯಾಜಿಕ್ ನಂಬರ್ ಆಗಿರುವ 36 ಕ್ಷೇತ್ರಗಳಲ್ಲಿ ಜಯಿಸಬೇಕಿದೆ.
ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆ
ನವದೆಹಲಿ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೇ ಹಿನ್ನಡೆಯಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿ, ಚುನಾವಣೆಯಲ್ಲಿ ಅಬ್ಬರದ ಪ್ರಚಾರ ಮಾಡಿದ್ದ ಕೇಜ್ರಿವಾಲ್ ಅವರೇ ಈಗ ಹಿನ್ನಡೆ ಅನುಭವಿಸಿದ್ದರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರ ಎದುರು ಹಿನ್ನಡೆ ಅನುಭವಿಸಿದ್ದಾರೆ. ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರೇ ಹಿನ್ನಡೆ ಅನುಭವಿಸುತ್ತಿದ್ದಾರೆ. ಹಾಗಾಗಿ, ಫಲಿತಾಂಶವು ಇನ್ನಷ್ಟು ಕುತೂಹಲ ಕೆರಳಿಸಿದೆ.