Delhi Elections Results: ಆಮ್‌ ಆದ್ಮಿಗೆ ಹಿನ್ನಡೆ, ಗೆಲುವಿನತ್ತ ಬಿಜೆಪಿ

Update: 2025-02-08 03:32 GMT

ರಾಷ್ಟ್ರದ ಗಮನ ಸೆಳೆದಿರುವ ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು ಪ್ರಕಟವಾಲೊದೆ. ಬೆಳಿಗ್ಗೆ 8 ಗಂಟೆಗೆ ಆರಂಭವಾಗಿರುವ ಮತ ಎಣಿಕೆ ಪ್ರಕ್ರಿಯೆ ಆಡಳಿತಾರೂಢ ಆಮ್‌ ಆದ್ಮಿ ಪಕ್ಷಕ್ಕೆ ಹಿನ್ನಡೆಯನ್ನು ತೋರಿಸಿದೆ.

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಬಂದೋಬಸ್ತ್​​ ವ್ಯವಸ್ತೆ ಕೈಗೊಳ್ಳಲಾಗಿದೆ. ನಾಲ್ಕು ಹಂತಗಳಲ್ಲಿ ಭದ್ರತೆ ಇದ್ದು ದೆಹಲಿ ಪೊಲೀಸರು ಮತ ಎಣಿಕೆ ಕೇಂದ್ರಗಳ ಸುತ್ತ ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ.

ದೆಹಲಿಯ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಲಿದೆ ಎಂಬುದಾಗಿ ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಹೀಗಾಗಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. ದೆಹಲಿಯಲ್ಲಿ ಅಧಿಕಾರ ಹಿಡಿಯಲು ಒಟ್ಟು 70ರಲ್ಲಿ 36 ಸ್ಥಾನಗಳು ಸಾಕಾಗಿದ್ದು, ಈಗಾಗಲೇ .36 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಪ್‌ ೨೮ ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್‌ ಕೇವಲ ೧ ಕಡೆ ಮುನ್ನಡೆ ಕಾಯ್ದುಕೊಂಡಿದೆ.

ಆ ಮೂಲಕ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಅಧಿಕಾರ ಕಳೆದುಕೊಳ್ಳುವ ಲಕ್ಷಣಗಳು ನಿಚ್ಚಳವಾಗಿ ಕಾಣುತ್ತಿವೆ.

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಚಾಣಕ್ಯ ಸ್ಟ್ರಾಟಜಿಸ್, ಜೆವಿಸಿ, ಪೋಲ್ ಡೈರಿ, ಪಿ-ಮಾರ್ಕ್, ಪೀಪಲ್ಸ್ ಇನ್‌ಸೈಟ್ ಮತ್ತು ಪೀಪಲ್ಸ್ ಪಲ್ಸ್ ಎಂಬ ಆರು ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಗೆಲ್ಲುತ್ತದೆ ಎಂದು ನಿರೀಕ್ಷಿಸಿವೆ. ಪೋಲ್‌ ಆಫ್‌ ಪೋಲ್‌ ಪ್ರಕಾರ ಬಿಜೆಪಿ 44 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಆಪ್‌ 24 ಕ್ಷೇತ್ರಗಳನ್ನು ತಮ್ಮದಾಗಿಸಿಕೊಳ್ಳಲಿದೆ. ಕಾಂಗ್ರೆಸ್‌ ಹೋರಾಟಕ್ಕೆ ಡೆಲ್ಲಿ ಜನ ಮಣೆ ಹಾಕಿಲ್ಲ ಹಾಗೂ ಒಂದು ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ.

ಹಿಂದಿನ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸಮೀಕ್ಷೆಗಳು ನೀಡಿದ ಫಲಿತಾಂಶಗಳು ನಿಜವಾಗಿದ್ದವು. 2015 ಮತ್ತು 2020ರ ಚುನಾವಣೆಯಲ್ಲಿ ಎಕ್ಸಿಟ್ ಪೋಲ್‌ಗಳು ಆಮ್ ಆದ್ಮಿ ಪಕ್ಷ (AAP) ಗೆಲುವು ಸಾಧಿಸುವ ಬಗ್ಗೆ ಮುನ್ಸೂಚನೆ ನೀಡಿದ್ದವು, ಆದರೆ, ನೈಜ ಗೆಲುವಿನ ಅಂತರ ಇನ್ನೂ ಹೆಚ್ಚಿನದಾಗಿತ್ತು.

Tags:    

Similar News