ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಗೆ 15 ದಿನಗಳ ನ್ಯಾಯಾಂಗ ಬಂಧನ
ಇಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು,ʻ ಇಡಿಗೆ ನಂತರದ ದಿನಗಳಲ್ಲಿ ಅವರ ಹೆಚ್ಚಿನ ಕಸ್ಟಡಿ ಅಗತ್ಯವಿರಬಹುದುʼ ಎಂದು ಹೇಳಿದರು. ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದರು;
By : The Federal
Update: 2024-04-01 07:03 GMT
ಏಪ್ರಿಲ್ 1: ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಜಾರಿ ನಿರ್ದೇಶನಾಲಯ (ಇಡಿ) ಬಂಧನದ ವಿಸ್ತರಣೆಯನ್ನು ಕೋರಲಿಲ್ಲ. ಇಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು,ʻ ಇಡಿಗೆ ನಂತರದ ದಿನಗಳಲ್ಲಿ ಅವರ ಹೆಚ್ಚಿನ ಕಸ್ಟಡಿ ಅಗತ್ಯವಿರಬಹುದುʼ ಎಂದು ಹೇಳಿದರು. ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದರು.
ನ್ಯಾಯಾಲಯಕ್ಕೆ ಕರೆತರುವಾಗ ಕೇಜ್ರಿವಾಲ್, ʻಪ್ರಧಾನಿ ನರೇಂದ್ರ ಮೋದಿ ಮಾಡುತ್ತಿರುವ ಕೆಲಸ ದೇಶಕ್ಕೆ ಒಳ್ಳೆಯದಲ್ಲʼ ಎಂದು ಹೇಳಿದರು.
ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಲಾಗಿದೆ.