ದೆಹಲಿ ಮದ್ಯ ಹಗರಣ | ಕವಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇಡಿ
ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.;
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ (ಮಾ. 16) ನ್ಯಾಯಾಲಯ ಮುಂದೆ ಹಾಜರುಪಡಿಸಿದೆ.
ತೆಲಂಗಾಣ ವಿಧಾನ ಪರಿಷತ್ ಸದಸ್ಯೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರ ಮುಂದೆ ಹಾಜರುಪಡಿಸಿದ್ದು, ಅವರು ಶೀಘ್ರದಲ್ಲೇ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.
"ನಾವು ನ್ಯಾಯಾಲಯದಲ್ಲಿ ಹೋರಾಡುತ್ತೇವೆ" ಎಂದು ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ನಿನ್ನೆ ಸಂಜೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅವರ ನಿವಾಸದಿಂದ ಕವಿತಾ ಅವರನ್ನು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿ ದೆಹಲಿಗೆ ಕರೆತಂದಿತ್ತು.
2021-22 ರ ದೆಹಲಿಯ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯ ವ್ಯಾಪಾರಿಗಳ "ಸೌತ್ ಗ್ರೂಪ್" ಲಾಬಿಗೆ ಕವಿತಾ ಸಂಪರ್ಕ ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.