Delhi Polls: ಸ್ವತಂತ್ರ ವೀಕ್ಷಕರ ನೇಮಿಸಿ : ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಪತ್ರ
Delhi Polls: ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕೇಜ್ರಿವಾಲ್, ಆಪ್ ಕಾರ್ಯಕರ್ತರ ಮೇಲೆ ದಾಳಿ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.;
ಆಪ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ದೌರ್ಜನ್ಯ ನಡೆಯುತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇದನ್ನು ತಡೆಯವುದಕ್ಕೆ ಪೊಲೀಸರಿಗೆ ಆರಗುತ್ತಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಚುನಾವಣಾ ಆಯೋಗ ನವದೆಹಲಿ ಕ್ಷೇತ್ರದಲ್ಲಿ ಸ್ವತಂತ್ರ ವೀಕ್ಷಕರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕೇಜ್ರಿವಾಲ್, ಆಪ್ ಕಾರ್ಯಕರ್ತರ ಮೇಲೆ ದಾಳಿ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೇಜ್ರಿವಾಲ್ ಅವರ ಆರೋಪಗಳ ಬಗ್ಗೆ ಬಿಜೆಪಿ ಹಾಗೂ ದೆಹಲಿ ಪೊಲೀಸರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ನವ ದೆಹಲಿಯಲ್ಲಿ ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ಈ ನಡುವೆ ಆಪ್ ಕಾರ್ಯಕರ್ತರ ಮೇಲೆ ಕೆಲವರು ದಾಳಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.
arvind kejriwal,arvind kejriwal latest news,kejriwal,arvind kejriwal news,arvind kejriwal on bjp,arvind kejriwal press conference,arvind kejriwal latest news today,latest news arvind kejriwal,arvind kejriwal on yamuna river,kejriwal live,arvind kejriwal speech,pm modi on arvind kejriwal,kejriwal live today,nayab saini on arvind kejriwal,arvind kejriwal latest speech,rahul gandhi vs arvind kejriwal,kejriwal news,kejriwal message to bjp
ನವದೆಹಲಿ ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಬಗ್ಗೆ ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಶನಿವಾರ ಇಲ್ಲಿನ ರೋಹಿಣಿ ಪ್ರದೇಶದಲ್ಲಿ ಸಾರ್ವಜನಿಕ ರ್‍ಯಾಲಿಯಲ್ಲಿ ಭಾಗಿಯಾಗಿದ್ದ ರಿಥಾಲಾ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಮೊಹಿಂದರ್ ಗೋಯಲ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಶನಿವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಬಿಜೆಪಿ ಕಾರ್ಯಕರ್ತರು ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ನವದೆಹಲಿ ಕ್ಷೇತ್ರದಲ್ಲಿ ಪ್ರಚಾರ ಮಾಡದಂತೆ ತಡೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.