ಮಹಾರಾಷ್ಟ್ರ | ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ, ನಾಳೆ ಸಿಎಂ ಆಗಿ ಪ್ರಮಾಣವಚನ

ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬುಧವಾರ ಮುಂಬೈನಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಧ್ಯಾಹ್ನ 3.30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ;

Update: 2024-12-04 07:05 GMT
Devendra Fadnavis unanimously elected as leader; to be Maharashtra CM

ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ನಾಯಕನಾಗಿ ದೇವೇಂದ್ರ ಫಡ್ನವಿಸ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬುಧವಾರ ಬೆಳಗ್ಗೆ ನಡೆಸ ಕೋರ್ ಕಮಿಟಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.



ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬುಧವಾರ ಮುಂಬೈನಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಫಡ್ನವೀಸ್ ಉಪಸ್ಥಿತರಿದ್ದರು.

ಬಿಜೆಪಿ ತನ್ನ ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ರೂಪಾನಿ ಅವರನ್ನು ಕೇಂದ್ರ ವೀಕ್ಷಕರಾಗಿ ನೇಮಿಸಿದೆ. ಶಾಸಕಾಂಗ ಪಕ್ಷದ ಸಭೆಗೆ ಮುಂಚಿತವಾಗಿ, ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಅವರು ಮಹಾಯುತಿ ಪಾಲುದಾರರು ಬುಧವಾರ ಮಧ್ಯಾಹ್ನ 3.30 ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ಹೇಳಿದರು.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಯಶಸ್ಸನ್ನು ಸಾಧಿಸಿತ್ತು. ರಾಜ್ಯದ 288 ವಿಧಾನಸಭಾ ಸ್ಥಾನಗಳಲ್ಲಿ 132 ಸ್ಥಾನಗಳನ್ನು ಗೆದ್ದುಕೊಂಡಿತು.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್​ಸಿಪಿಯೊಂದಿಗೆ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 230 ಸ್ಥಾನಗಳ ಬಹುಮತವನ್ನು ಹೊಂದಿದೆ.

Tags:    

Similar News