ಸಂಸದರ ಪಟ್ಟಿ ರಾಷ್ಟ್ರಪತಿಗೆ ಸಲ್ಲಿಸಲಿರುವ ಚುನಾವಣೆ ಆಯೋಗ

Update: 2024-06-06 08:28 GMT

ನವದೆಹಲಿ, ಜೂ.6: ಮುಖ್ಯ ಚುನಾವಣೆ ಆಯುಕ್ತ ರಾಜೀವ್ ಕುಮಾರ್, ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಅವರು ನೂತನ ಸಂಸದರ ಪಟ್ಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗುರುವಾರ ಸಂಜೆ ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. 

ಪಟ್ಟಿಯನ್ನು ಹಸ್ತಾಂತರಿಸಿದ ನಂತರ 18 ನೇ ಲೋಕಸಭೆಯನ್ನು ರಚಿಸುವ ಔಪಚಾರಿಕ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಕೇಂದ್ರ ಸಚಿವ ಸಂಪುಟದ ಶಿಫಾರಸನ್ನು ಅಂಗೀಕರಿಸಿದ ರಾಷ್ಟ್ರಪತಿ ಅವರು ಬುಧವಾರ 17ನೇ ಲೋಕಸಭೆಯನ್ನು ವಿಸರ್ಜನೆ ಮಾಡಿ ಆದೇಶ ಹೊರಡಿಸಿದ್ದರು. 

ಬಿಜೆಪಿ ನೇತೃತ್ವದ ಎನ್‌ಡಿಎ ಚುನಾವಣೆಯಲ್ಲಿ ಬಹುಮತ ಗಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಸರ್ಕಾರ ರಚಿಸಲಿದ್ದಾರೆ. ಎನ್‌ಡಿಎ 293 ಹಾಗೂ ಇಂಡಿಯ ಒಕ್ಕೂಟ 234 ಸ್ಥಾನಗಳನ್ನು ಗೆದ್ದಿದೆ.

Tags:    

Similar News