ಅಕ್ರಮ ಹಣ ವರ್ಗಾವಣೆ ಆರೋಪ; ವಿಂಜೋ ಸಂಸ್ಥಾಪಕಿ ಸೇರಿ ಇಬ್ಬರನ್ನು ಬಂಧಿಸಿದ ಇಡಿ

ವಿಂಜೋ ಗೇಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಗ್ರಾಹಕರಿಗೆ ಮೋಸ ಮಾಡುತ್ತಿರುವುದು ತನಿಖೆಯಿಂದ ಬಯಲಾಗಿತ್ತು. ಗೇಮಿಂಗ್ ಹೆಸರಲ್ಲಿ ಕಂಪನಿಯು ರಹಸ್ಯವಾಗಿ ಅಲ್ಗಾದರಿದಮ್‌ಗಳು ಮತ್ತು ಸಾಫ್ಟ್‌ವೇರ್‌ಗಳನ್ನು ಬಳಸಿ ಗ್ರಾಹಕರನ್ನು ಸೋಲಿಸುತ್ತಿತ್ತು ಎಂಬ ವಿಷಯ ತನಿಖೆಯಿಂದ ಬೆಳಕಿಗೆ ಬಂದಿತ್ತು.

Update: 2025-11-27 07:18 GMT

ಸಾಂದರ್ಭಿಕ ಚಿತ್ರ

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಆನ್‌ಲೈನ್‌ ಮని ಗೇಮಿಂಗ್ ಪ್ಲಾಟ್‌ಫಾರಂ ʼವಿಂಜೋʼ ಸಂಸ್ಥಾಪಕಿ ಸೌಮ್ಯಾ ಸಿಂಗ್ ರಾಥೋಡ್‌ ಮತ್ತು ಪಾವನ್ ನಂದ ಎಂಬುವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಬುಧವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಬಂಧನ ಪ್ರಕ್ರಿಯೆ ನಡೆಸಲಾಗಿದೆ. ಬುಧವಾರ ರಾತ್ರಿಯೇ ಆರೋಪಿಗಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇಬ್ಬರನ್ನೂ ಒಂದು ದಿನದ ಮಟ್ಟಿಗೆ ಕಸ್ಟಡಿಗೆ ಪಡೆಯಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಬೆಂಗಳೂರು, ಗುರ್‌ಗಾಂವ್‌ನಲ್ಲಿನ ಗೇಮಿಂಗ್ ಆ್ಯಪ್ 'ವಿಂಜೋ'ಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ನಡೆಸಿ, ಸುಮಾರು 505 ಕೋಟಿ ರೂ. ಮೌಲ್ಯದ ಬ್ಯಾಂಕ್ ಠೇವಣಿ, ಬಾಂಡ್ ಹಾಗೂ ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಇಡಿ ವಶಪಡಿಸಿಕೊಂಡಿತ್ತು.

ವಿಂಜೋ ಗೇಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಗ್ರಾಹಕರಿಗೆ ಮೋಸ ಮಾಡುತ್ತಿರುವುದು ತನಿಖೆಯಿಂದ ಗೊತ್ತಾಗಿದೆ. ಗೇಮಿಂಗ್ ಹೆಸರಲ್ಲಿ ಕಂಪನಿಯು ರಹಸ್ಯವಾಗಿ ಅಲ್ಗಾದರಿದಮ್‌ ಮತ್ತು ಸಾಫ್ಟ್‌ವೇರ್‌ಗಳನ್ನು ಬಳಸಿ ಗ್ರಾಹಕರನ್ನು ಸೋಲಿಸುತ್ತಿತ್ತು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿತ್ತು.

ವಿಂಜೋ ಯುಎಸ್ ಇಂಕ್ ಎಂಬ ನಕಲಿ ಕಂಪೆನಿಯನ್ನು ಸೃಷ್ಟಿಸಿ, ಭಾರತದಿಂದ ಸುಮಾರು 55 ಮಿಲಿಯನ್ ಡಾಲರ್ (ಅಂದಾಜು 489.90 ಕೋಟಿ ರೂ.) ಹಣವನ್ನು ಅಮೆರಿಕ ಮತ್ತು ಸಿಂಗಾಪುರಕ್ಕೆ ಅಕ್ರಮವಾಗಿ ವರ್ಗಾಯಿಸಲಾಗಿದೆ. ಅಲ್ಲದೇ, ಕೇಂದ್ರ ಸರ್ಕಾರವು ರಿಯಲ್ ಮನಿ ಗೇಮ್ಸ್ ಅನ್ನು ನಿಷೇಧಿಸಿದ ನಂತರವೂ ಕಂಪನಿಯು ಗ್ರಾಹಕರಿಗೆ ಹಿಂತಿರುಗಿಸಬೇಕಾದ 43 ಕೋಟಿ ರೂ. ಹಣವನ್ನು ತಡೆಹಿಡಿದಿದೆ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿತ್ತು.

ಆನ್ಲೈನ್ ಗೇಮಿಂಗ್ ಹೆಸರಿನಲ್ಲಿ ಭಾರೀ ವಂಚನೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಇಡಿ ಅಧಿಕಾರಿಗಳು 'ಪಾಕೆಟ್-52' ಮತ್ತು 'ಗೇಮ್ಸ್ ಕ್ರಾಫ್ಟ್ ಟೆಕ್ನಾಲಜೀಸ್' ಕಚೇರಿಗಳ ಮೇಲೆ ದಾಳಿ ನಡೆಸಿತ್ತು.

ಕೇಂದ್ರ ಸರ್ಕಾರವು 'ಪ್ರಮೋಷನ್ ಅಂಡ್ ರೆಗ್ಯುಲೇಷನ್ ಆಫ್ ಆನ್‌ಲೈನ್‌ ಗೇಮಿಂಗ್ ಆಕ್ಟ್ - 2025' ಅಡಿಯಲ್ಲಿ ರಿಯಲ್ ಮನಿ ಗೇಮ್ ಗಳನ್ನು ನಿಷೇಧಿಸಿದ್ದರೂ, ಈ ಕಂಪನಿಗಳು ಗ್ರಾಹಕರ 30 ಕೋಟಿ ರೂ. ಅಧಿಕ ಹಣವನ್ನು ವಾಪಸ್ ನೀಡದೆ ತಮ್ಮ ಎಸ್ಕೊ ಖಾತೆಗಳಲ್ಲಿ ಇರಿಸಿಕೊಂಡಿವೆ. ಕಂಪನಿಯ ನಿರ್ದೇಶಕರ ಮೊಬೈಲ್, ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸುಮಾರು 18.57 ಕೋಟಿ ರೂ. ಇರುವ 8 ಬ್ಯಾಂಕ್ ಖಾತೆಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿತ್ತು.

Tags:    

Similar News