Arvind Kejriwal: ಇಡಿ ತನಿಖೆಗೆ ಕೇಂದ್ರ ಸಮ್ಮತಿ; ನಾಮಪತ್ರ ಸಲ್ಲಿಕೆಗೆ ಮೊದಲೇ ಕೇಜ್ರಿವಾಲ್‌ಗೆ ಆಘಾತ

Arvind Kejriwal : ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಕಾನೂನು ಕ್ರಮ ಜರುಗಿಸಲು ಜಾರಿ ನಿರ್ದೇಶನಾಲಯವು ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ನವೆಂಬರ್ 6ರಂದು ತೀರ್ಪು ನೀಡಿತ್ತು.;

Update: 2025-01-15 06:13 GMT
ಅರವಿಂದ್‌ ಕೇಜ್ರಿವಾಲ್‌

ಪ್ರಸ್ತುತ ರದ್ದಾಗಿರುವ ದೆಹಲಿ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal:) ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯವು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಅನುಮತಿ ನೀಡಿದೆ. ಕೇಜ್ರಿವಾಲ್‌ ಡೆಲ್ಲಿ ಚುನಾವಣೆಗೆ ನವ ದೆಹಲಿ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕಿಂತ ಕೆಲ ಹೊತ್ತಿನ ಮೊದಲು ಅವರಿಗೆ ಆಘಾತ ಎದುರಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 218 ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಜಾರಿ ನಿರ್ದೇಶನಾಲಯವು ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ನವೆಂಬರ್ 6ರಂದು ತೀರ್ಪು ನೀಡಿತ್ತು. ಅದಂತೆ ಹೊಸ ಕ್ರಮ ಕೈಗೊಳ್ಳಲಾಗಿದೆ. ಅಬಕಾರಿ ನೀತಿ ಪ್ರಕರಣದ ತನಿಖೆ ದೆಹಲಿ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ.

ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಕಳೆದ ತಿಂಗಳು ಸಿಬಿಐಗೆ ಅನುಮತಿ ನೀಡಿದ್ದರು. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ತನಿಖೆ ನಡೆಸಲು ಸಿಬಿಐ ತಯಾರಿ ನಡೆಸುತ್ತಿದೆ.

ಕಳೆದ ವರ್ಷ (೨೦೨೪) ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಮೇ 17ರಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ ಮದ್ಯ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲು ತೆಗೆದುಕೊಂಡ 100 ಕೋಟಿ ಲಂಚದಲ್ಲಿ 45 ಕೋಟಿ ರೂ.ಗಳನ್ನು ಆಮ್ ಆದ್ಮಿ ಪಕ್ಷದ (ಎಎಪಿ) ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿದೆ ಎಂದು ಆರೋಪಿಸಲಾಗಿತ್ತು. ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ಸದಸ್ಯರಾಗಿ ಈ ಪ್ರಕರಣದಲ್ಲಿ ಕೇಜ್ರಿವಾಲ್ ಹೊಣೆಗಾರರು ಎಂದು ಇಡಿ ಅಭಿಪ್ರಾಯಪಟ್ಟಿದೆ.

ಕೇಜ್ರಿವಾಲ್ ಅವರು ಆಪ್‌ನ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಿದ ಇಡಿ, ಲಂಚ ತೆಗೆದುಕೊಳ್ಳುವ ನಿರ್ಧಾರದಲ್ಲಿ ಅವರು ಕೂಡ ಭಾಗಿಯಾಗಿದ್ದರು ಎಂದು ಇಡಿ ಹೇಳಿದೆ. ಕೇಜ್ರಿವಾಲ್ ಕಿಕ್ ಬ್ಯಾಕ್ ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಅದು ಆರೋಪಿಸಿದೆ. 1,100 ಕೋಟಿ ಮೌಲ್ಯದ ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂದು ಅದು ಹೇಳಿದೆ. 

Tags:    

Similar News