ಅನಿಲ್ ಅಂಬಾನಿಯ 1,400 ಕೋಟಿಗೂ ಹೆಚ್ಚು ಮೌಲ್ಯದ ಹೊಸ ಆಸ್ತಿ ಮುಟ್ಟುಗೋಲಿಗೆ ಇಡಿ ಆದೇಶ

ಈ ಹಿಂದೆಯೂ ಇಡಿ ಅಧಿಕಾರಿಗಳು 7,500 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಈಗ 1400 ಕೋಟಿ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಈವರೆಗೆ ಒಟ್ಟು 9,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಂತಾಗಿದೆ.

Update: 2025-11-20 10:35 GMT

ಅನಿಲ್ ಅಂಬಾನಿ

Click the Play button to listen to article

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅವರ ಸಂಸ್ಥೆಗಳ ಮೇಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯವು (ಇಡಿ) ಈಗ 1,400 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೊಸ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 

ಈ ಹಿಂದಿನ ಪ್ರಕರಣದಲ್ಲಿ 7,500 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈಗ 1400 ಕೋಟಿ ರೂ. ಮುಟ್ಟುಗೋಲಿನೊಂದಿಗೆ ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡ ಒಟ್ಟು ಆಸ್ತಿಯ ಮೌಲ್ಯವು ಸುಮಾರು 9,000 ಕೋಟಿ ರೂ.ಗಳಿಗೆ ತಲುಪಿದೆ.

ಇ.ಡಿ. ತನಿಖೆಯ ಹಿನ್ನೆಲೆ

ʼಇಂಡಿಯನ್ ಎಕ್ಸ್‌ಪ್ರೆಸ್‌ʼ ವರದಿ ಪ್ರಕಾರ, ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (RHFL) ಮತ್ತು ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್ (RCFL) ಮೂಲಕ ಸಾರ್ವಜನಿಕ ಹಣವನ್ನು ಬೇರೆಡೆಗೆ ಅಕ್ರಮವಾಗಿ ವರ್ಗಾಯಿಸಿದ ಆರೋಪಗಳಿಗೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಈ ತನಿಖೆ ನಡೆಸುತ್ತಿದ್ದಾರೆ. 

ನವೆಂಬರ್‌ ತಿಂಗಳ ಆರಂಭದಲ್ಲಿ ಅನಿಲ್ ಅಂಬಾನಿಗೆ ಸಂಬಂಧಿಸಿದ 3,084 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಇವುಗಳಲ್ಲಿ ಮುಂಬೈನಲ್ಲಿರುವ ಮನೆ, ದೆಹಲಿ, ನೋಯ್ಡಾ, ಪುಣೆ, ಥಾಣೆ, ಚೆನ್ನೈ ಮತ್ತು ಕಾಂಚಿಪುರಂನಂತಹ ಪ್ರಮುಖ ನಗರಗಳಲ್ಲಿರುವ ರಿಲಯನ್ಸ್ ಸೆಂಟರ್‌ಗಳು ಸೇರಿ ಹಲವಾರು ಆಸ್ತಿಗಳು ಸೇರಿದ್ದವು.

Tags:    

Similar News