ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ

Update: 2024-04-15 09:37 GMT

ಏಪ್ರಿಲ್‌ 15- ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 23 ರವರೆಗೆ ವಿಸ್ತರಿಸಿದೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ದ ವಿಶೇಷ ನ್ಯಾಯಾಧೀಶರಾ ಕಾವೇರಿ ಬವೇಜಾ ಅವರು ಈ ಹಿಂದೆ ನೀಡಿದ್ದ ಕಸ್ಟಡಿ ಅವಧಿ ಮುಗಿದಿತ್ತು. ಕೇಜ್ರಿವಾಲ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿದರು. 

ತನಿಖೆ ನಿರ್ಣಾಯಕ ಹಂತದಲ್ಲಿದೆ ಎಂದು ಹೇಳಿರುವ ಇಡಿ, ಕೇಜ್ರಿವಾಲ್ ಅವರ ಕಸ್ಟಡಿಯನ್ನು ವಿಸ್ತರಿಸುವಂತೆ ಕೋರಿತ್ತು. ಏತನ್ಮಧ್ಯೆ, ಕೇಜ್ರಿವಾಲ್‌ ಬಂಧನದ ವಿರುದ್ಧದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಾಲಯ ಪ್ರತಿಕ್ರಿಯೆಯನ್ನು ಸಲ್ಲಿಸಲು ಇಡಿಗೆ ಏಪ್ರಿಲ್ 27 ರ ವರೆಗೆ ಕಾಲಾವಕಾಶ ನೀಡಿದೆ.

Tags:    

Similar News