Kerala Road Rage | ಕೇರಳದಲ್ಲಿ ಟೆಂಟ್‌ಗೆ ನುಗ್ಗಿದ ಟ್ರಕ್: ಐವರ ಸಾವು
ಗಾಯಗೊಂಡವರನ್ನು ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.;
ರಸ್ತೆ ಬದಿಯಲ್ಲಿ ಹಾಕಿದ್ದ ಟೆಂಟ್‌ಗೆ ಮೇಲೆ ಟ್ರಕ್ ನುಗ್ಗಿದ ಪರಿಣಾಮ ಇಬ್ಬರು ಅಲೆಮಾರಿ ಕುಟುಂಬದ ಮಕ್ಕಳು ಸೇರಿದಂತೆ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದ ಅಲೆಮಾರಿಗಳ ಈ ಅಪಫಾತದ ಸಂತ್ರಸ್ತರು. ವಳಪಾಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಟ್ಟಿಕಾದ ರಾಷ್ಟ್ರೀಯ ಹೆದ್ದಾರಿ ಬದಿ ಅವರು ಟೆಂಟ್ ಹಾಕಿ ಮಲಗಿದ್ದರು. ಮುಂಜಾನೆ 4.30 ರ ಸುಮಾರಿಗೆ ಆ ಟೆಂಟ್‌ಗಳ ಮೇಲೆ ಟ್ರಕ್ ಹರಿದಿದೆ.
ಗಾಯಗೊಂಡವರನ್ನು ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಲ್ಲಿ ಒಂದೂವರೆ ಮತ್ತು ನಾಲ್ಕು ವರ್ಷದ ಇಬ್ಬರು ಮಕ್ಕಳು ಸೇರಿದ್ದಾರೆ. ಇಬ್ಬರು ಮಹಿಳೆಯರು ಸಹ ಮೃತಪಟ್ಟಿದ್ದಾರೆ. ವಾಹನದ ಚಾಲಕ ಮತ್ತು ಕ್ಲೀನರ್ ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.