ದಟ್ಟ ಮಂಜಿನಿಂದ ಸರಣಿ ಅಪಘಾತ; 10 ಬಸ್‌, ಕಾರುಗಳು ಡಿಕ್ಕಿಯಾಗಿ ಬೆಂಕಿಗಾಹುತಿ

ದಟ್ಟ ಮಂಜಿನಿಂದಾಗಿ ರಸ್ತೆ ಕಾಣದ ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದ್ದು ನಾಲ್ವರು ಬಲಿಯಾಗಿದ್ದಾರೆ. 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ.

Update: 2025-12-16 02:52 GMT
ಮಥುರಾದಲ್ಲಿ ಸಂಭವಿಸಿದ ಸರಣಿ ಅಪಘಾತ
Click the Play button to listen to article

ದಟ್ಟ ಮಂಜಿನಿಂದಾಗಿ ಮಂಗಳವಾರ ಬೆಳಿಗ್ಗೆ ಮಥುರಾದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ 10ಕ್ಕೂ ಹೆಚ್ಚು ಬಸ್‌ಗಳು ಮತ್ತು ಮೂರು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. 25 ಮಂದಿ ಗಾಯಗೊಂಡಿದ್ದಾರೆ. ಇನ್ನು ವಾಹನಗಳ ಪರಸ್ಪರ ಡಿಕ್ಕಿ ಹೊಡೆದುಕೊಂಡು ತಕ್ಷಣ ಬೆಂಕಿ ಕಾಣಿಸಿಕೊಂಡಿದೆ. ಬಸ್‌ ಕಾರುಗಳು ಬೆಂಕಿಗಾಹುತಿಯಾಗಿವೆ.

ದಟ್ಟ ಮಂಜಿನಿಂದಾಗಿ ರಸ್ತೆ ಕಾಣದ ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದ್ದು, ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶ್ಲೋಕ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು,ಘಟನಾ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಕ್ತಾಯಗೊಳ್ಳುತ್ತಿವೆ ಮತ್ತು ನಿರ್ಬಂಧಿಸಲಾದ ಹೆದ್ದಾರಿಯನ್ನು ತೆರವುಗೊಳಿಸಲು ಮತ್ತು ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

"ಈ ಮಂಗಳವಾರ ಬೆಳಿಗ್ಗೆ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ಅಪಘಾತದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ. ನೀವು ಗಮನಿಸಬಹುದಾದಂತೆ, ಇಲ್ಲಿ ಇನ್ನೂ ಮಂಜು ಕವಿದಿದೆ. ಈ ಕಳಪೆ ಗೋಚರತೆಯು ಸರಿಸುಮಾರು 10 ಬಸ್‌ಗಳು ಮತ್ತು ಮೂರು ಸಣ್ಣ ಕಾರುಗಳು ಪರಸ್ಪರ ಡಿಕ್ಕಿ ಹೊಡೆಯಲು ಕಾರಣವಾಯಿತು. ಇದರಿಂದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದರು.

ರಕ್ಷಣಾ ಕಾರ್ಯಗಳ ಕುರಿತು ಮಾತನಾಡಿದ ಎಸ್‌ಎಸ್‌ಪಿ, "ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕ ದೌಡಾಯಿಸಿದ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಮತ್ತು ಸ್ಥಳೀಯ ಆಡಳಿತದ ತಂಡಗಳನ್ನುತಕ್ಷಣವೇ ಕಾರ್ಯಾಚರಣೆ ಕೈಗೆತ್ತಿಕೊಂಡಿವೆ. ನಮಗೆ ದೊರೆತ ಮಾಹಿತಿಯ ಪ್ರಕಾರ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ. ಇಲ್ಲಿಯವರೆಗೆ, ನಾಲ್ಕು ಜನರು ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದರು.

"ಸುಮಾರು 25 ಜನ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಅವರಿಗೆ ಪ್ರಸ್ತುತ ಅಗತ್ಯ ವೈದ್ಯಕೀಯ ಆರೈಕೆ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ, ಇಲ್ಲಿ ಹಾಜರಿರುವ ಉಳಿದ ಜನರನ್ನು ಸರ್ಕಾರಿ ವಾಹನಗಳ ಮೂಲಕ ಅವರ ಮನೆಗಳಿಗೆ ಸಾಗಿಸಲು ನಾವು ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ರಸ್ತೆ ಅಪಘಾತವನ್ನು ಉಲ್ಲೇಖಿಸಿದ ಮಥುರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಚಂದ್ರ ಪ್ರಕಾಶ್ ಸಿಂಗ್, “ ಇದು ತುಂಬಾ ದುರದೃಷ್ಟಕರ ಘಟನೆ. ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ವರ ಶವಗಳನ್ನು ನಾವು ವಶಪಡಿಸಿಕೊಂಡಿದ್ದೇವೆ. 12 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಮತ್ತು 14 ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ತಕ್ಷಣವೇ ನಿಯೋಜಿಸಲಾಗಿದೆ. ಗಾಯಾಳುಗಳನ್ನು ಸಿ.ಎಚ್.ಸಿ. ಬಲದೇವ್ ಮತ್ತು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿಸಿದರು.

"ನಾವು ಬದುಕುಳಿದ ಪ್ರಯಾಣಿಕರನ್ನು ಸ್ಥಳದಿಂದ ಆಸ್ಪತ್ರೆಗೆ ಬಸ್‌ಗಳ ಮೂಲಕ ಸಾಗಿಸುತ್ತಿದ್ದೇವೆ. ಪರಿಹಾರ ಕಾರ್ಯ ಸರಾಗವಾಗಿ ನಡೆಯುತ್ತಿದೆ. ಅವರಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ಸಿಗುವಂತೆ ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಮತ್ತೆ, ಪರಿಹಾರ ಕಾರ್ಯ ನಡೆಯುತ್ತಿದೆ” ಎಂದರು.

Tags:    

Similar News