ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

ಮಲಿಕ್ ಅವರು ದೀರ್ಘಕಾಲದವರೆಗೆ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು. ಮೇ 11 ರಂದು ಅವರ ಸ್ಥಿತಿ ಹದಗೆಟ್ಟಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.;

Update: 2025-08-05 08:46 GMT

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನರಾಗಿದ್ದಾರೆ. 

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ (79) ಅವರು ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮಲಿಕ್ ಅವರು ದೀರ್ಘಕಾಲದವರೆಗೆ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು. ಮೇ 11 ರಂದು ಅವರ ಆರೋಗ್ಯ ಸ್ಥಿತಿ ಹದಗೆಟ್ಟಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಮ್ಮುಕಾಶ್ಮೀರದ ಕೊನೆಯ ರಾಜ್ಯಪಾಲ

ಸತ್ಯಪಾಲ್ ಮಲಿಕ್ ಅವರು ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಜಮ್ಮುಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ಜಮ್ಮು ಕಾಶ್ಮೀರಕ್ಕೆ ನೀಡಿದ್ದ 370 ವಿಶೇಷ ಸ್ಥಾನಮಾನ ರದ್ದುಪಡಿಸಲಾಗಿತ್ತು. 2019 ಆಗಸ್ಟ್ 5 ರಂದು 370 ವಿಶೇಷ ಸ್ಥಾನಮಾನ ಹಿಂಪಡೆಯಲಾಗಿತ್ತು. 

ರಾಜಕೀಯ ಪಯಣ

ಸತ್ಯಪಾಲ್ ಮಲಿಕ್ ಅವರು 1946 ಜುಲೈ 24 ರಂದು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಹಿಸಾವಾಡ ಗ್ರಾಮದಲ್ಲಿ ಜನಿಸಿದರು. ಮೀರತ್ ವಿಶ್ವವಿದ್ಯಾಲಯದಿಂದ ವಿಜ್ಞಾನ ಮತ್ತು ಎಲ್‌ಎಲ್‌ಬಿ ಪದವಿ ಪಡೆದ ಅವರು, 1968-69ರಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು.

ರಾಜಕೀಯ ವೃತ್ತಿಜೀವನ

1974-77: ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯ

1980-86 ಮತ್ತು 1986-89: ಉತ್ತರ ಪ್ರದೇಶವನ್ನು ಪ್ರತಿನಿಧಿಸಿ ರಾಜ್ಯಸಭಾ ಸದಸ್ಯರಾಗಿ ಸೇವೆ

1989-91: ಜನತಾದಳ ಪಕ್ಷದಿಂದ ಅಲಿಗಢದಿಂದ 9ನೇ ಲೋಕಸಭೆಯ ಸದಸ್ಯರು

1980: ಚೌಧರಿ ಚರಣ್ ಸಿಂಗ್ ಅವರ ಲೋಕದಳ ಪಕ್ಷದಿಂದ ರಾಜ್ಯಸಭೆಗೆ ನಾಮನಿರ್ದೇಶನ

1984: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ, 1986ರಲ್ಲಿ ಮತ್ತೆ ರಾಜ್ಯಸಭೆಗೆ ಆಯ್ಕೆ.

1987: ಬೋಫೋರ್ಸ್ ಹಗರಣದ ನಂತರ ಕಾಂಗ್ರೆಸ್‌ಗೆ ರಾಜೀನಾಮೆ, ವಿ.ಪಿ. ಸಿಂಗ್ ಪಕ್ಷಕ್ಕೆ ಸೇರ್ಪಡೆ.

1990: ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವರಾಗಿ ಸಂಕ್ಷಿಪ್ತ ಸೇವೆ.

ಸತ್ಯಪಾಲ್ ಮಲಿಕ್ ಅವರ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. 

Tags:    

Similar News