ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಷಿ ನಿಧನ

Update: 2024-02-23 09:29 GMT

ಮುಂಬೈ, ಫೆ.23 - ಲೋಕಸಭೆಯ ಮಾಜಿ ಸ್ಪೀಕರ್ ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. 

ಅವರನ್ನು ಬುಧವಾರ ಇಲ್ಲಿನ ಪಿ.ಡಿ. ಹಿಂದೂಜಾ ಆಸ್ಪತ್ರೆಗೆ ದಾಖಲಿಸಿದ್ದು, ಶುಕ್ರವಾರ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜೋಶಿ (86) ಅವರು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ಆಸ್ಪತ್ರೆ ಗುರುವಾರ ಪ್ರಕಟಣೆಯಲ್ಲಿ ತಿಳಿಸಿತ್ತು. 2023ರ ಮೇ ತಿಂಗಳಲ್ಲಿ ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಅವರು 1995 ರಿಂದ 1999 ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು ಮತ್ತು ಅವರು ಉನ್ನತ ಹುದ್ದೆಯನ್ನು ಅಲಂಕರಿಸಿದ ಅವಿಭಜಿತ ಶಿವಸೇನೆಯ ಮೊದಲ ನಾಯಕರಾಗಿದ್ದರು. ಸಂಸತ್ತಿಗೆ ಚುನಾಯಿತರಾಗಿದ್ದ ಅವರು ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002 ರಿಂದ 2004 ರವರೆಗೆ ಲೋಕಸಭೆಯ ಸ್ಪೀಕರ್ ಆಗಿದ್ದರು. 

Tags:    

Similar News