Manmohan Singh: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

Manmohan Singh: ಅಪಾರ ಬುದ್ಧಿಶಕ್ತಿ ಹಾಗೂ ವಿನಮ್ತ ವ್ಯಕ್ತಿತ್ವ ಹೊಂದಿದ್ದ ಅವರು ಜಾಗತಿಕವಾಗಿ ಅಪಾರ ಗೌರವ ಹೊಂದಿದ್ದರು. ಅಲ್ಲದೇ ಭಾರತದ ಆರ್ಥಿಕತೆಯನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Update: 2024-12-26 17:00 GMT

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ (ಡಿಸೆಂಬರ್ 26) ನವದೆಹಲಿಯಲ್ಲಿ ನಿಧನರಾದರು.

ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಗುರುವಾರ ಸಂಜೆ ಏಮ್ಸ್ ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ಅಪಾರ ಬುದ್ಧಿಶಕ್ತಿ ಹಾಗೂ ವಿನಮ್ತ ವ್ಯಕ್ತಿತ್ವ ಹೊಂದಿದ್ದ ಅವರು ಜಾಗತಿಕವಾಗಿ ಅಪಾರ ಗೌರವ ಹೊಂದಿದ್ದರು. ಅಲ್ಲದೇ ಭಾರತದ ಆರ್ಥಿಕತೆಯನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ಆಧುನಿಕ ಭಾರತದ ವಾಸ್ತುಶಿಲ್ಪಿಗಳಲ್ಲಿ ಒಬ್ಬರೆಂಬ ಗೌರವ ಹೊಂದಿದ್ದಾರೆ. 

2004 ರಲ್ಲಿ, ಡಾ.ಸಿಂಗ್ ಅವರು ಯುಪಿಎ ಸರ್ಕಾರವನ್ನು ಮುನ್ನಡೆಸುವ ಮೂಲಕ ಭಾರತದ ಮೊದಲ ಸಿಖ್ ಪ್ರಧಾನಿ ಎಂಬ ಖ್ಯಾತಿ ಗಳಿಸಿದ್ದರು. ಅವರ ಅಧಿಕಾರಾವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್ಆರ್‌ಇಜಿಎ), ಮಾಹಿತಿ ಹಕ್ಕು ಕಾಯ್ದೆ ಮತ್ತು ಇಂಡೋ-ಯುಎಸ್ ಸೇರಿದಂತೆ ಮಹತ್ವದ ಉಪಕ್ರಮಗಳನ್ನು ಕೈಗೊಂಡಿದ್ದರು. ಅದರಲ್ಲಿ ನಾಗರಿಕ ಪರಮಾಣು ಒಪ್ಪಂದವೂ ಸೇರಿದೆ.

ಡಾ. ಸಿಂಗ್ ಅವರ ಶೈಕ್ಷಣಿಕ ಪ್ರಯಾಣವು ಶ್ರೇಷ್ಠವಾಗಿದೆ. 1957ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆ ಗೌರವ ಪದವಿ ಪಡೆದಿದ್ದರು. ಅದಕ್ಕೆ ಮೊದಲು ಅವರು ಪಂಜಾಬ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪೂರ್ಣಗೊಳಿಸಿದ್ದರು. ನಂತರ ಅವರು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಿಫಿಲ್ ಪಡೆದಿದ್ದರು.

ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುವ ಮೊದಲು, ಡಾ.ಸಿಂಗ್ ಅವರು ಶೈಕ್ಷಣಿಕ ಮತ್ತು ಸಾರ್ವಜನಿಕ ಸೇವೆಯಲ್ಲಿ ವಿಶಿಷ್ಟ ವೃತ್ತಿಜೀವನ ನಡೆಸಿದ್ದರು. ಅವರು ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡಿದ್ದರು ಮತ್ತು ಮುಖ್ಯ ಆರ್ಥಿಕ ಸಲಹೆಗಾರ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಮತ್ತು ಯೋಜನಾ ಆಯೋಗದ ಅಧ್ಯಕ್ಷ ಸೇರಿದಂತೆ ಭಾರತದಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದರು. 

Tags:    

Similar News