ತೆಲಂಗಾಣದಲ್ಲಿ ಹಳಿ ತಪ್ಪಿದ 11 ರೈಲ್ವೆ ಬೋಗಿಗಳು: ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ
ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ಗೂಡ್ಸ್ ರೈಲಿನ ಹನ್ನೊಂದು ಬೋಗಿಗಳು ಹಳಿ ತಪ್ಪಿದ ಪರಿಣಾಮ 20 ಪ್ಯಾಸೆಂಜರ್ ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್) ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.;
ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ಗೂಡ್ಸ್ ರೈಲಿನ ಹನ್ನೊಂದು ಬೋಗಿಗಳು ಹಳಿ ತಪ್ಪಿದ ಪರಿಣಾಮ 20 ಪ್ಯಾಸೆಂಜರ್ ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್) ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ರಾಘವಪುರಂ ಮತ್ತು ರಾಮಗುಂಡಂ ನಡುವೆ ಕಬ್ಬಿಣದ ಅದಿರು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಹನ್ನೊಂದು ಬೋಗಿಗಳು ಹಳಿ ತಪ್ಪಿದ ಕಾರಣ ದೆಹಲಿ-ಚೆನ್ನೈ ಮುಖ್ಯ ರೈಲು ಮಾರ್ಗದಲ್ಲಿ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗೂಡ್ಸ್ ರೈಲು ಹಳಿತಪ್ಪಿದ ಕಾರಣ 20 ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಎಸ್‌ಸಿಆರ್ ವಲಯದ ಪ್ರಕಟಣೆ ತಿಳಿಸಿದೆ.
ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳು ಮಾತ್ರವಲ್ಲದೆ ಎಕ್ಸ್‌ಪ್ರೆಸ್, ಪ್ಯಾಸೆಂಜರ್ ರೈಲುಗಳು ಮತ್ತು ಇತರ ಸರಕು ರೈಲುಗಳು ಹಳಿಗಳ ಮೇಲೆ ಸಿಲುಕಿಕೊಂಡಿವೆ. ಈ ಅವಧಿಯಲ್ಲಿ ಪ್ರಯಾಣಿಕರು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು ಮತ್ತು ಅನೇಕ ರೈಲುಗಳ ವೇಗವು ತುಂಬಾ ನಿಧಾನವಾಯಿತು ಅಥವಾ ಅವು ಮಧ್ಯದಲ್ಲಿಯೇ ನಿಂತವು. ಎರಡು ರೈಲುಗಳ ವೇಳಾಪಟ್ಟಿಯನ್ನು ಮರುಹೊಂದಿಸಲಾಗಿದೆ. ಮತ್ತು ಮೂರು ರೈಲುಗಳನ್ನು ರದ್ದುಗೊಳಿಸಲಾಗಿದೆ.
ತಪ್ಪಿದ ಹಳಿಯನ್ನು ದುರಸ್ಥಿಗೊಳಿಸಿ ರೈಲು ಸಂಚಾರವನ್ನು ಆದಷ್ಟು ಬೇಗ ಆರಂಭಿಸಲಾಗಿವುದು ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.