ಭಾರತದ ಸೇನಾ ಸಾಮರ್ಥ್ಯಕ್ಕೆ ಹೊಸ ಬಲ: ಡ್ರೋನ್‌ನಿಂದ ಕ್ಷಿಪಣಿ ಉಡಾವಣೆ ಯಶಸ್ವಿ

ಭಾರತೀಯ ಸೇನೆಗೆ ಅಗತ್ಯವಿರುವ ಪ್ರಮುಖ ರಕ್ಷಣಾ ತಂತ್ರಜ್ಞಾನಗಳನ್ನು ಈಗ ನಮ್ಮದೇ ದೇಶದ ಉದ್ಯಮಗಳು ರೂಪಿಸಿ, ನಿರ್ಮಿಸುವ ಮಟ್ಟಿಗೆ ಬೆಳೆದಿರುವುದು ಹೆಮ್ಮೆಯ ಸಂಗತಿ ಎಂದು ಅವರು ಅಭಿನಂದನೆ ಸಲ್ಲಿಸಿದ್ದಾರೆ.;

Update: 2025-07-25 07:02 GMT

ಡ್ರೋನ್‌ನಿಂದ ಕ್ಷಿಪಣಿ ಉಡಾವಣೆ ಯಶಸ್ವಿ

ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದು, ಡ್ರೋನ್‌ನಿಂದ ಉಡಾಯಿಸಬಲ್ಲ ನಿಖರ ಮಾರ್ಗದರ್ಶಿ ಕ್ಷಿಪಣಿಯನ್ನು (ULPGM-V3) ಯಶಸ್ವಿಯಾಗಿ ಪರೀಕ್ಷಿಸಿದೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ನಡೆದ ಈ ಪರೀಕ್ಷೆಯು, ದೇಶದ ರಕ್ಷಣಾ ಸಾಮರ್ಥ್ಯ ಮತ್ತು ಸ್ವಾವಲಂಬನೆಯ ಗುರಿಗಳಿಗೆ ದೊಡ್ಡ ಉತ್ತೇಜನ ನೀಡಿದೆ.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿರುವ ರಾಷ್ಟ್ರೀಯ ಮುಕ್ತ ವಾಯುನೆಲೆಯಲ್ಲಿ (NOAR) ಈ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಲಾಯಿತು. ಡಿಆರ್‌ಡಿಒ ಮತ್ತು ಭಾರತೀಯ ಖಾಸಗಿ ಉದ್ಯಮಗಳ ಸಹಭಾಗಿತ್ವದಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಡ್ರೋನ್‌ನಿಂದ ಉಡಾಯಿಸಲಾದ ಕ್ಷಿಪಣಿಯು ಅತ್ಯಂತ ನಿಖರವಾಗಿ ತನ್ನ ಗುರಿಯನ್ನು ತಲುಪಿ ಧ್ವಂಸಗೊಳಿಸಿತು ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಈ ಮಹತ್ವದ ಸಾಧನೆಯನ್ನು ಶ್ಲಾಘಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಇದೊಂದು 'ಭಾರತದ ಕ್ಷಿಪಣಿ ಸಾಮರ್ಥ್ಯಕ್ಕೆ ಹೊಸ ಸಾಕ್ಷಿ' ಎಂದು ಬಣ್ಣಿಸಿದ್ದಾರೆ. ಭಾರತೀಯ ಸೇನೆಗೆ ಅಗತ್ಯವಿರುವ ಪ್ರಮುಖ ರಕ್ಷಣಾ ತಂತ್ರಜ್ಞಾನಗಳನ್ನು ಈಗ ನಮ್ಮದೇ ದೇಶದ ಉದ್ಯಮಗಳು ರೂಪಿಸಿ, ನಿರ್ಮಿಸುವ ಮಟ್ಟಿಗೆ ಬೆಳೆದಿರುವುದು ಹೆಮ್ಮೆಯ ಸಂಗತಿ ಎಂದು ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಯಶಸ್ವಿ ಪರೀಕ್ಷೆಯು ಹಲವು ಆಯಾಮಗಳಲ್ಲಿ ಮಹತ್ವ ಪಡೆದಿದೆ. ಇದು ಭಾರತೀಯ ಸೇನೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ, ರಕ್ಷಣಾ ಕ್ಷೇತ್ರದಲ್ಲಿ 'ಆತ್ಮನಿರ್ಭರ ಭಾರತ'ದ ಗುರಿಯನ್ನು ಸಾಧಿಸುವತ್ತ ಇಟ್ಟಿರುವ ಮತ್ತೊಂದು ದಿಟ್ಟ ಹೆಜ್ಜೆಯಾಗಿದೆ. ಡಿಆರ್‌ಡಿಒ ಜೊತೆಗೆ ಹಲವಾರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್‌ಎಂಇ) ಹಾಗೂ ಸ್ಟಾರ್ಟ್‌ಅಪ್‌ಗಳು ಈ ಯೋಜನೆಯಲ್ಲಿ ಭಾಗಿಯಾಗಿರುವುದು, ದೇಶೀಯ ತಂತ್ರಜ್ಞಾನ ಅಭಿವೃದ್ಧಿಗೆ ಹೊಸ ದಾರಿ ತೆರೆದಿದೆ.

Tags:    

Similar News